ಪುಟ್ಟರಾಜ ಕವಿ ಗವಾಯಿಗಳು ಅವರ 15ನೇ ಪುಣ್ಯಸ್ಮರಣೋತ್ಸವ
15th Commemoration of poet Puttaraj Gawai
ಹುಬ್ಬಳ್ಳಿ 18: ಗದಗನಲ್ಲಿರುವ ಪ್ರಸಿದ್ದ ಸಂಗೀತ ಶ್ರೀ ವೀರೇಶ್ವರ ಪುಣ್ಯಾಶ್ರಮದ ಪರಮಪೂಜ್ಯ ಗಾನಯೋಗಿ ಶ್ರೀ ಪಂಚಾಕ್ಷರಿ ಗವಾಯಿಗಳು ಅವರ 81ನೇ ಹಾಗೂ ಪದ್ಮಭೂಷಣ ಡಾ. ಪುಟ್ಟರಾಜ ಕವಿ ಗವಾಯಿಗಳು ಅವರ 15ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ದಾನೇಶ್ವರಿ ಸಂಗೀತ ವಿದ್ಯಾಲಯದಲ್ಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಉಭಯ ಪೂಜ್ಯರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪರಮಪೂಜ್ಯ ಗಾನಯೋಗಿ ಶ್ರೀ ಪಂಚಾಕ್ಷರಿ ಗವಾಯಿಗಳು ಹಾಗೂ ಪದ್ಮಭೂಷಣ ಡಾ. ಪುಟ್ಟರಾಜ ಕವಿ ಗವಾಯಿಗಳು ಅವರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಸಂಗೀತ, ವಚನಗಳನ್ನು ಹಾಡುವುದರ ಮೂಲಕ ಗೌರವಾರೆ್ಣ ಸಲ್ಲಿಸಲಾಯಿತು.
ಗಾನಯೋಗಿ ಶ್ರೀ ಪಂಚಾಕ್ಷರಿ ಗವಾಯಿಗಳು ಹಾಗೂ ಡಾ. ಪುಟ್ಟರಾಜ ಗವಾಯಿಗಳು ಮಾಡಿದ ಅಮೋಘ ಸೇವೆಯನ್ನು ಸ್ಮರಣೆ ಮಾಡಲಾಯಿತು. ಮುಖ್ಯ ಅತಿಥಿ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಮಾತನಾಡಿ ಮಕ್ಕಳು ಶಿಸ್ತು, ಸಮಯ ಪ್ರಜ್ಞೆಯನ್ನು ರೂಡಿಸಿಕೊಳ್ಳಬೇಕು. ಓದಿನ ಕಡೆ ಹೆಚ್ಚು ಗಮನ ಕೊಡಬೇಕು. ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಬೇಕು. ನೊಂದ ಮನಸ್ಸಿಗೆ ಸಾತ್ವಾನ ಹೇಳುವ, ಸಂತಸ ಗೋಳಿಸುವ ಅಪಾರವಾದ ಶಕ್ತಿ ಸಂಗೀತಕ್ಕೆ ಇದೆ. ಸಂಗೀತದಿಂದ ಹಲವಾರು ರೋಗಗಳನ್ನು ಹತೋಟಿಯಲ್ಲಿ ಇಡಲು ಸಾಧ್ಯವಿದೆ. ಸಂಗೀತವನ್ನು ಒಂದು ಥೇರಪಿರೂಪದಲ್ಲಿ ಉಪಯೋಗಿಸುವ ಸಾಧ್ಯತೆ ಇದೆ.
ನಿಯಮಿತವಾಗಿ ಸಂಗೀತ ಆಲಿಸುತ್ತಾ ಇದ್ದರೆ ಮನಸ್ಸು ಪ್ರಸನ್ನತೆಯಿಂದ ಕೂಡಿರುತ್ತದೆ ಎಂದರು. ಗಾನಯೋಗಿ ಶ್ರೀ ಪಂಚಾಕ್ಷರಿ ಗವಾಯಿಗಳು ಹಾಗೂ ಪದ್ಮಭೂಷಣ ಡಾ. ಪುಟ್ಟರಾಜ ಗವಾಯಿಗಳ ಭಾವಚಿತ್ರಕ್ಕೆ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವಾರೆ್ಣ ಸಲ್ಲಿಸಿದರು. ಉಭಯ ಶ್ರೀಗಳು ಸಮಾಜಕ್ಕೆ, ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಶ್ರದ್ಧಾ, ಭಕ್ತಿಯಿಂದ ಸ್ಮರಿಸಿದರು. ಉಭಯ ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ದಾನೇಶ್ವರಿ ಸಂಗೀತ ವಿದ್ಯಾಲಯದ ಸಹಯೋಗದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು ಎಂದರು.ದಾನೇಶ್ವರಿ ಸಂಗೀತ ಪಾಠಶಾಲೆಯ ಸಂಗೀತ ಶಿಕ್ಷಕಿ, ಕನ್ನಡ ಪ್ರಾಧ್ಯಾಪಕಿ ಪ್ರೊ ಶೋಭಾ ಜಾಬಿನ ಅವರಿಗೆ ಸಂಗೀತ ಕ್ಷೇತ್ರದ ಸಾಧನೆಗೆ ವಿವಿಧ ಸಂಘ, ಸಂಸ್ಥೆಗಳಿಂದ ಪ್ರತಿಷ್ಠಿತ ಪ್ರಶಸ್ತಿಗಳಾದ ರಾಷ್ಟ್ರೀಯ ರತ್ನ ಪ್ರಶಸ್ತಿ ಹಾಗೂ ರಾಷ್ಟ್ರೀಯ ಬಸವ ಚೇತನ ಪ್ರಶಸ್ತಿಗಳು ಸಂಧಿದ್ದಕ್ಕೆ ಸಂಗೀತ ಗಾಯಕಿ ಪ್ರೊ ಶೋಭಾ ಮಲ್ಲಿಕಾರ್ಜುನ ಜಾಬಿನ್ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು, ಗ್ರಂಥ, ಹಣ್ಣುಗಳನ್ನು ನೀಡಿ, ಮಾಲಾರೆ್ಣ ಮಾಡಿ ಹೃದಯ ಸ್ಪರ್ಶಿಯಾಗಿ, ಅತ್ಯಂತ ಗೌರವದಿಂದ ಸನ್ಮಾನಿಸಲಾಯಿತು. ಅಭಿನಂದನೆಗಳನ್ನು ಸಲ್ಲಿಸಿ, ಶುಭ ಕೋರಿದರು. ಕನ್ನಡ ಸಾಹಿತ್ಯ ಪರಿಷತ್ತು ಹುಬ್ಬಳ್ಳಿ ತಾಲೂಕು ಶಹರ ಘಟಕದ ಅಧ್ಯಕ್ಷ ವಿದ್ಯಾ ವಂಟಮೂರಿ, ಕಾರ್ಯದರ್ಶಿ ಸಿದ್ದಮ್ಮ ಅಡಿವೆನ್ನವರ, ಇಂಜಿನಿಯರ್ ಮಲ್ಲಿಕಾರ್ಜುನ ಜಾಬಿನ, ಸೋಹನ ಸುರೇಶ ಹೊರಕೇರಿ, ಡಾ. ಶೋಭಾ ಬಿರಾದಾರ, ಅನಸೂಯಾ ಪಾಟೀಲ, ಪ್ರೊ ಉಮಾ ಕೇರಿ, ಕವಿತಾ ಎಂ.ಯು, ಡಾ. ಮಿನಲ್ ಸಾಳುಂಕೆ, ಸನ್ಮಯಿ, ಆವನಿ, ರಿಷಿಕಾ, ತನುಶ್ರೀ, ಚಾರ್ವಿ, ಶ್ರೇಯಾ, ಮಾನ್ಯ, ಹರ್ಷಿಕಾ, ಅನ್ವಿಕಾ, ತಾನ್ವಿ, ಸಾನ್ವಿ, ಅನ್ವಿತಾ, ಸಿದ್ದಮ್ಮ, ಕವಿತಾ, ಉಮಾ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು. ದಾನೇಶ್ವರಿ ಸಂಗೀತ ಪಾಠಶಾಲೆಯ ಮಕ್ಕಳು ವಚನ ಗಾಯನ ಪ್ರಸ್ತುತಪಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 