ಪಂ.ಪುಟ್ಟರಾಜ ಗವಾಯಿಗಳ 15ನೇ ಪುಣ್ಯಸ್ಮರಣೋತ್ಸವ
15th Commemoration of the Death of Pt. Puttaraja Gawai
ಪಂ.ಪುಟ್ಟರಾಜ ಗವಾಯಿಗಳ 15ನೇ ಪುಣ್ಯಸ್ಮರಣೋತ್ಸವ
ಗದಗ 16: ಪಂ. ಪುಟ್ಟರಾಜ ಕವಿ ಗವಾಯಿಗಳವರು ಜಗತ್ತಿನ ಕಲ್ಯಾಣಕ್ಕಾಗಿ ಬದುಕಿದವರು. ಅವರನ್ನು ಜಗತ್ತು ಸದಾಸ್ಮರಿಸುತ್ತದೆ ಎಂದು ನೀಲಗುಂದ ಶ್ರೀ ಗುದ್ನೇಶ್ವರ ಮಠದ ಪೂಜ್ಯಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು ಹೇಳಿದರು.
ಗ್ರಾಮಸ್ಥರ ಸಹಯೋಗದಲ್ಲಿ ಪರಮಪೂಜ್ಯ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಶಿವಯೋಗಿಗಳವರ 15ನೇ ಪುಣ್ಯಸ್ಮರಣೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪಂ. ಪಂಚಾಕ್ಷರಿ ಗವಾಯಿಗಳವರ ಕೃಪೆಯಿಂದ ಪುಟ್ಟರಾಜ ಕವಿ ಗವಾಯಿಗಳು ಅದ್ಭುತ ಲೋಕವನ್ನು ಸೃಷ್ಟಿಸಿದರು. ಗುರುವಿನ ನಿಷ್ಠೆ ಗಟ್ಟಿಯಾದರೆ ಕಷ್ಟಗಳಿಗೆ ಪರಿಹಾರ ಸಿಗುತ್ತದೆ ಎಂಬುದಕ್ಕೆ ಪಂ. ಪುಟ್ಟರಾಜ ಕವಿ ಗವಾಯಿಗಳವರ ಗುರುನಿಷ್ಠೆ ಕಾರಣವಾಗಿದೆ ಎಂದು ಹೇಳಿದರು.
ನಂತರ ಸಂಜೆ ಐದು ದಿನಗಳವರೆಗೆ ನಿರಂತರವಾಗಿ ನಡೆದ ಮಹಾತ್ಮರ ಬದುಕು ಬೆಳಕು ಪ್ರವಚನ ಕಾರ್ಯಕ್ರಮದ ಮಂಗಲೋತ್ಸ ಜರುಗಿತು. ಪ್ರವಚನಕಾರರಾಗಿ ಶಿವಲಿಂಗಯ್ಯಶಾಸ್ತ್ರಿಗಳು ಹಿರೇಮಠ ಸಿದ್ದಾಪುರವರು ನೆರವೇರಿಸಿದರು. ಸಂಗೀತಗಾರರಾಗಿ ಸಿದ್ದೇಶಕುಮಾರ ಅವರು ತಬಲಾಸಾಥ್ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 