ಬೆಳಗಾವಿ 25: ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆದ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಬೈಲಹೊಂಗಲ ತಾಲೂಕಿನ ದೇವಲಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಗುರು ಕರಾಳೆ ಇವರಿಗೆ ಜಿಲ್ಲಾ ಮಟ್ಟದ ಉತ್ತಮ ಸ್ವೀಪ್ ತರಬೇತುದಾರ ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ನೀಡಿ ಗೌರವಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ. ಎನ್. ಇನವಳ್ಳಿ, ಎಸ್ ಪಿ ಡಾ: ಭೀಮಾಶಂಕರ ಎಸ್. ಗುಳೇದ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಎಮ್. ಹೊನಕೇರಿ, ಶಿಕ್ಷಣ ಇಲಾಖೆ ಅಧಿಕಾರಿಗಳು, ತರಬೇತುದಾರರು ಇದ್ದರು.