21ರಂದು ಡಾ. ಪಂ. ಪುಟ್ಟರಾಜ ಕವಿಗವಾಯಿಗಳ 16ನೇ ಪುಣ್ಯಸ್ಮರಣೋತ್ಸವ
16th death anniversary commemoration of Dr. Pt. Puttaraja Kavi Gawai on the 21st
ಗದಗ, ಸೆ. 19: ಗಾನಯೋಗಿ ಡಾ. ಪಂ. ಪುಟ್ಟರಾಜ ಕವಿಗವಾಯಿಗಳ 16ನೇ ಪುಣ್ಯಸ್ಮರಣೋತ್ಸವ, ಶಿವಯೋಗಿ ಶ್ರೀ ಪುಟ್ಟರಾಜ ಪ್ರಶಸ್ತಿ ಪ್ರದಾನ ಹಾಗೂ ಸ್ವರ ನಮನ ಕಾರ್ಯಕ್ರಮ ಸೆ. 21ರಂದು ಬೆಳಿಗ್ಗೆ 10.30ಕ್ಕೆ ನಗರದ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ನಡೆಯಲಿದೆ.
ಗದಗಿನ ತೋಂಟದಾರ್ಯ ಮಠದ ಪೂಜ್ಯಶ್ರೀ ಜಗದ್ಗುರು ತೋಂಟದ ಸಿದ್ಧರಾಮ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶ್ರೀ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಹಾಗೂ ಗಾನಯೋಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಗೌರವಾಧ್ಯಕ್ಷ ಪೂಜ್ಯಶ್ರೀ ಡಾ. ಕಲ್ಲಯ್ಯಜ್ಜನವರು ಸಮಾರಂಭದ ನೇತೃತ್ವ ವಹಿಸುವರು. ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಸಣ್ಣ ಕುರಡಗಿ ಕಾರ್ಯಕ್ರಮ ಉದ್ಘಾಟಿಸುವರು. ಜಂಗಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಯ್ಯ ನವಲಿಹಿರೇಮಠ ಹಾಗೂ ಬಿ. ಶ್ರೀರಾಮುಲು ಅವರ ಆಪ್ತ ಸಹಾಯಕ ಎಸ್.ಎಚ್. ಶಿವನಗೌಡ ಪ್ರಶಸ್ತಿ ಪ್ರದಾನ ಮಾಡುವರು. ಗಾನಯೋಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಅಧ್ಯಕ್ಷ ಶಿವಲಿಂಗಯ್ಯಸ್ವಾಮಿ ಹಿರೇಮಠ ಸಿದ್ದಾಪುರ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಲಿಂ. ರಾಜಶೇಖರಯ್ಯ ಹಾಗೂ ಲಿಂ. ನೀಲಾಂಬಿಕಾ ನವಲಿಹಿರೇಮಠ ಅವರ ಸ್ಮರಣಾರ್ಥ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಂ. ದೇವೇಂದ್ರಕುಮಾರ ಪತ್ತಾರ, ಬಿ. ಶ್ರೀರಾಮುಲು ಅವರ ತಾಯಿ ಶ್ರೀಮತಿ ಹೊನ್ನೂರಮ್ಮ ಅವರ ಸ್ಮರಣಾರ್ಥ ವಾದ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆಕಾಶವಾಣಿ ‘ಎ’ ಗ್ರೇಡ್ ಕಲಾವಿದ ಗದಗಿನ ಪಂ. ಶರಣಕುಮಾರ ಗುತರ್ಗಿ ಹಾಗೂ ಜ್ಯೋತಿಷ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪಂ. ಲಿಂ. ಚನ್ನವೀರಶಾಸ್ತ್ರಿ ಹಿರೇಮಠ ಅವರ ಸ್ಮರಣಾರ್ಥ ರಂಗಭೂಮಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕೃತ ಬಡ್ನಿ ರಾಚಯ್ಯ ಹಿರೇಮಠ ಅವರಿಗೆ ಶಿವಯೋಗಿ ಶ್ರೀ ಪುಟ್ಟರಾಜ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ನಂತರ ಶ್ರೀ ವೀರೇಶ್ವರ ಪುಣ್ಯಾಶ್ರಮದ ಶಿಷ್ಯ-ಪ್ರಶಿಷ್ಯರಿಂದ ಅಹೋರಾತ್ರಿ ಸ್ವರ ನಮನ ಕಾರ್ಯಕ್ರಮ ನಡೆಯಲಿದೆ. ಗುಲ್ಬರ್ಗದ ಸಂಗಮೇಶ ಪಾಟೀಲ ಸಭಾ ನಿರ್ವಹಣೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಬೆಳಿಗ್ಗೆ 8 ಗಂಟೆಗೆ ಶಿವಯೋಗಿ ಡಾ. ಪಂ. ಪುಟ್ಟರಾಜ ಗುರುಗಳ ಭಾವಚಿತ್ರದ ಮೆರವಣಿಗೆ ಶ್ರೀ ವೀರೇಶ್ವರ ಪುಣ್ಯಾಶ್ರಮದಿಂದ ಕುಂಭ-ಕಳಸ ಹಾಗೂ ವಿವಿಧ ಕಲಾತಂಡಗಳೊಂದಿಗೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾದಾಸೋಹ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಮಠಗಳ ಸ್ವಾಮೀಜಿಗಳು, ಗಣ್ಯರು ಹಾಗೂ ಸೇವಾ ಸಮಿತಿ ಪದಾಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ ಎಂದು ಸೇವಾ ಸಮಿತಿಯ ಪತ್ರಿಕಾ ಕಾರ್ಯದರ್ಶಿ ಶರಣಯ್ಯಶಾಸ್ತ್ರಿಗಳು ಆಗಸಬಾಳ ತಿಳಿಸಿದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 