ಭಾರತದಲ್ಲಿ 17,296 ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆ
ನವದೆಹಲಿ, ಜೂ 26: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 17,296 ಕೊರೋನಾ ಪ್ರಕರಣಗಳು ಮತ್ತು 407 ಸಾವುಗಳು ವರದಿಯಾಗಿದೆ. ಇದು ಇಲ್ಲಿಯವರೆಗೆ ದಾಖಲಾಗಿರುವ ಅತಿ ಹೆಚ್ಚಿನ ಒಂದು ದಿನದ ಪ್ರಕರಣಗಳಾಗಿದ್ದು, ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 4.90 ಲಕ್ಷಕ್ಕೇರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.ಇಲ್ಲಿಯವರೆಗೆ ಸೋಂಕಿನಿಂದ 15,301 ಮಂದಿ ಮೃತಪಟ್ಟಿದ್ದಾರೆ.
ಈ ನಡುವೆ, ಗುರುವಾರ ಒಂದೇ ದಿನ ದಾಖಲೆಯ 13,940 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 2.85 ಲಕ್ಷ ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಚೇತರಿಕೆಯ ಪ್ರಮಾಣ ಶೇ. 58.24ಕ್ಕೇರಿಕೆಯಾಗಿದ್ದು, 1.89 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ತಿಳಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ (ಐಸಿಎಂಆರ್) ಪ್ರಕಾರ, ಜೂ 25ರವರೆಗೆ 77.76 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 