ಬೆಂಗಳೂರು, ಮೇ 26,ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಫಿಲಿಪ್ಪೀನ್ಸ್ ನ ಮನಿಲಾದಿಂದ ಬುಧವಾರ ಬೆಳಗ್ಗೆ 7 ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹದಿನೇಳನೇ ಏರ್ ಇಂಡಿಯಾ ವಿಮಾನದಲ್ಲಿ 176 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 176 ಮಂದಿ ಪ್ರಯಾಣಿಕರಲ್ಲಿ 115 ಪುರುಷರು ಮತ್ತು 61 ಮಹಿಳೆಯರು ಇದ್ದಾರೆ.ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 176 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ. 176 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.