ಮೆಕ್ಸಿಕೋ, ಜೂನ್ 8, ಮೆಕ್ಸಿಕೋದಲ್ಲಿ ಭಾನುವಾರ ಮತ್ತೆ 188 ಜನರು ಕೊರೊನಾ ವೈರಾಣು ಸೋಂಕಿನಿಂದ ಮೃತಪಟ್ಟಿದ್ದು ಒಟ್ಟು ಸಾವನ್ನಪ್ಪಿದ್ದವರ ಸಂಖ್ಯೆ 13,699 ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 3,484 ಜನರಲ್ಲಿ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 1,17,103 ಕ್ಕೆ ಏರಿಕೆಯಾಗಿದೆ.ಶನಿವಾರದಂದು 341 ಸಾವಿನ ಪ್ರಕರಣಗಳು ಹಾಗೂ 3,593 ಸೋಂಕಿನ ಪ್ರಕರಣಗಳು ವರದಿಯಾಗಿತ್ತು.ಈವರೆಗೆ 13,699 ಜನರು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಆಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ.
ಸದ್ಯ 19,629 ಜನರು ಸೋಂಕಿನಿಂದ ಬಳಲುತ್ತಿದ್ದಾರೆ. ಅಲ್ಲದೇ 1,175 ಸಾವಿನ ಪ್ರಕರಣಗಳಲ್ಲಿ ಕೊರೊನಾ ವೈರಾಣು ಸೋಂಕಿನ ಶಂಕೆ ಇದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಮಾರ್ಚ್ 11 ರಂದು ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ಕೋವಿಡ್ – 19 ಅನ್ನು ಸಾಂಕ್ರಾಮಿಕ ಎಂದು ಘೋಷಿಸಿತ್ತು. ಈವರೆಗೆ ಜಗತ್ತಿನಾದ್ಯಂತ ಸುಮಾರು 69 ಲಕ್ಷ ಜನರು ಸೋಂಕಿನಿಂದ ಬಳಲುತ್ತಿದ್ದು 4 ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ವೈರಾಣು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.