19 ವರ್ಷಗಳ ಸೇವೆಗೆ ವಿದಾಯ: ಭೀಮಶಿ ಮಾಳಗಿ ಅವರಿಗೆ ಸನ್ಮಾನ
19 Years of Service: Bhimashi Malagi Felicitated on Retirement
ಬೈಲಹೊಂಗಲ: ತಾಲೂಕಿನ ನೇಸರಗಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಭೀಮಶಿ ಹನಮಂತಪ್ಪ ಮಾಳಗಿ ಅವರು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಸನ್ಮಾನಿಸಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಅಡಿವೆಪ್ಪ ಚಿಗರಿ, ಭೀಮಶಿ ಮಾಳಗಿ ಅವರು ನೇಸರಗಿ ಗ್ರಾಮ ಪಂಚಾಯಿತಿಯಲ್ಲಿ 19 ವರ್ಷಗಳ ಕಾಲ ಗುಮಾಸ್ತರಾಗಿ ಸೇವೆ ಸಲ್ಲಿಸಿದ ಬಳಿಕ ಪದೋನ್ನತಿ ಹೊಂದಿ ಒಂಬತ್ತು ವರ್ಷಗಳ ಕಾಲ ಪಂಚಾಯಿತಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇದೀಗ ವಯೋನಿವೃತ್ತಿ ಹೊಂದಿರುವ ಅವರ ಸೇವೆ ಅಪಾರವಾಗಿದ್ದು, ಪಂಚಾಯಿತಿ ಅಭಿವೃದ್ಧಿ ಹಾಗೂ ಆಡಳಿತದಲ್ಲಿ ಅವರು ಸಲ್ಲಿಸಿದ ಕೊಡುಗೆ ಸ್ಮರಣೀಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಿಡಿಒ ಸವಿತಾ ಹಾಲಹಳ್ಳಿ, ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 