ಹಡಗಿನ ಮೂಲಕ 19 ಕಾರ್ಮಿಕರು ಮಂಗಳೂರಿಗೆ ಆಗಮನ
ಮಂಗಳೂರು, ಮೇ 28,ಲಾಕ್‌ಡೌನ್‌ನಿಂದಾಗಿ ಲಕ್ಷದ್ವೀಪದಲ್ಲಿ ಸಿಲುಕಿಕೊಂಡಿದ್ದ ಮಂಗಳೂರಿನ 19 ಮಂದಿ ಕಾರ್ಮಿಕರು ಇಂದು ಹಡಗಿನ ಮೂಲಕ ನಗರಕ್ಕೆ ಆಗಮಿಸಿದರು.ಲಕ್ಷದ್ವೀಪದ ‘ಅಮಿನ್‌ದಿವಿ’ ಎಂಬ ಹಡಗಿನಲ್ಲಿ ಈ ಕಾರ್ಮಿಕರನ್ನು ಮಂಗಳೂರು ಬಂದರಿಗೆ ಕರೆತರಲಾಯಿತು.ಲಕ್ಷದ್ವೀಪದ ವಿವಿಧ ದ್ವೀಪಗಳಲ್ಲಿ ದುಡಿಯುತ್ತಿದ್ದ ಈ 19 ಮಂದಿ ಕಾರ್ಮಿಕರು ಲಾಕ್‌ಡೌನ್‌ನಿಂದಾಗಿ ಸುಮಾರು ಎರಡು ತಿಂಗಳಿನಿಂದ ತಮ್ಮ ಊರುಗಳಿಗೆ ವಾಪಾಸಾಗಲು ಸಾಧ್ಯವಾಗಿರಲಿಲ್ಲ. ಇದೀಗ ಲಕ್ಷದ್ವೀಪ ಸರಕಾರ ಕರ್ನಾಟಕ ಸರಕಾರದ ಅನುಮತಿಯೊಂದಿಗೆ ಅಗತ್ಯ ಪ್ರಕ್ರಿಯೆಗಳನ್ನು ಪೂರೈಸಿ ಲಕ್ಷದ್ವೀಪದ ‘ಅಮಿನ್‌ದಿವಿ’ ಹಡಗಿನ ಮೂಲಕ ಕಾರ್ಮಿಕರನ್ನು ಕಳುಹಿಸಿಕೊಟ್ಟಿದೆ.
ಮೇಯರ್ ದಿವಾಕರ ಪಾಂಡೇಶ್ವರ, ಶಾಸಕರಾದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಮೇಯರ್ ಅಶ್ರಫ್, ಸ್ಥಳೀಯ ಕಾರ್ಪೊರೇಟರ್ ಲತೀಫ್, ಕೊರೋನ ನಿಗ್ರಹದಳದ ಅಧಿಕಾರಿಗಳು, ಹಳೆ ಬಂದರಿನ ಲಕ್ಷದ್ವೀಪ ಜೆಟ್ಟಿಯಲ್ಲಿ ಬಂದರು ಸಂರಕ್ಷಣಾಧಿಕಾರಿ ಮುಹಮ್ಮದ್ ಗೌಸ್, ಹಳೆ ಬಂದರು ಬಳಕೆದಾರರ ಸಂಘಟನೆಯ ಪದಾಧಿಕಾರಿಗಳು, ಕಾರ್ಮಿಕರ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಕಾರ್ಮಿಕರನ್ನು ಬರಮಾಡಿಕೊಂಡರು.ಹಡಗು ದಡಕ್ಕೆ ಆಗಮಿಸಿದ ಬಳಿಕ ಹಡಗಿನಲ್ಲಿಯೇ ಅವರ ಆರೋಗ್ಯ ತಪಾಸಣೆ ನಡೆಸಲಾಯಿತು. ಸ್ಕ್ರೀನಿಂಗ್ ಬಳಿಕ ಅವರನ್ನು ಹಡಗಿನಿಂದ ಇಳಿಯಲು ಅವಕಾಶ ನೀಡಲಾಯಿತು. ಈ ವೇಳೆ ಕಾರ್ಮಿಕರ ಕುಟುಂಬದ ಸದಸ್ಯರು ಕೂಡ ಉಪಸ್ಥಿತರಿದ್ದರು.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 