ಮಾಸ್ಕ ಮಾ 11 : ಟರ್ಕಿಯಲ್ಲಿ ಮೊದಲ ಕೊರೊನಾ ಸೋಂಕು ಕೋವಿಡ್ 19 ಪ್ರಕರಣ ದೃಢಪಟ್ಟಿದೆ ಎಂದು ಅಲ್ಲಿನ ಆರೋಗ್ಯ ಸಚಿವ ಫರೆಟ್ಟಿನ್ ಕೋಕಾ ತಿಳಿಸಿದ್ದಾರೆ. ಸೋಂಕು ದೃಢಪಟ್ಟಿರುವ ವ್ಯಕ್ತಿ ಇತ್ತೀಚೆಗೆ ಯೂರೋಪ್ ಗೆ ಪ್ರವಾಸ ಮಾಡಿದ್ದರು ಎಂದು ಅವರು ಹೇಳಿದ್ದಾರೆ. ವಿಶ್ವಾದ್ಯಂತ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು ಸುಮಾರು 4 ಸಾವಿರ ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ. ಯೂರೋಪ್ ಖಂಡದಲ್ಲಿ ಇಟಲಿ ದೇಶದಲ್ಲಿ ಈ ಸೋಂಕು ಹೆಚ್ಚು ವ್ಯಾಪಿಸಿದೆ. ಫ್ರಾನ್ಸ್ ಮತ್ತು ಜರ್ಮನಿಯಲ್ಲಿ ಸೋಂಕು ಹೆಚ್ಚಾಗಿ ಕಂಡು ಬಂದಿದೆ. ಕಳೆದ ವರ್ಷದ ಡಿಸೆಂಬರ್ ಅಂತ್ಯದಲ್ಲಿ ಚೀನಾದ ವುಹಾನ್ ನಲ್ಲಿ ಮೊದಲ ಬಾರಿಗೆ ಹೊಸ ರೀತಿಯ ಕೊರೊನಾ ವೈರಾಣು ಸೋಂಕು ಕಾಣಿಸಿಕೊಂಡಿತ್ತು. ಜನವರಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ತುರ್ತು ಪರಿಸ್ಥಿತಿ ಘೋಷಿಸಿತ್ತು.