ಬಳ್ಳಾರಿ/ಹೊಸಪೇಟೆ,ಏ.24: ಕರೋನಾ ವೈರಾಣು ಹರಡುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬಳ್ಳಾರಿ ಹಾಗೂ ಹೊಸಪೇಟೆ ವಿಭಾಗದ ಮೈನಿಂಗ್ ಇಂಜಿನಿಯರ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ 2.5 ಲಕ್ಷ ರೂ.ಮೊತ್ತದ ಚೆಕ್ನ್ನು ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವರಾದ ಆನಂದ್ ಸಿಂಗ್ ಅವರ ಮುಖಾಂತರ ವಿತರಿಸಲಾಯಿತು.
ಕೋವಿಡ್-19 ಕಾರಣದಿಂದ ಭಾದಿತರಾಗಿರುವ ನಿರಾಶ್ರಿತರಿಗೆ ಆರೋಗ್ಯ, ಪಡಿತರ ಸೇವೆ ಜೊತೆಗೆ ಅಗತ್ಯ ನೆರವನ್ನು ನೀಡಲಾಗುತ್ತಿದೆ ಅದೇ ರೀತಿಯಾಗಿ ಹಲವು ಸಂಘ ಸಂಸ್ಥೆಗಳು, ಸಾರ್ವಜನಿಕರು ಕೇಂದ್ರ ಮತ್ತು ರಾಜ್ಯ ಸಕರ್ಾರಕ್ಕೆ ಸಹಾಯ ಮಾಡಲಾಗುತ್ತಿದೆ. ಜಿಲ್ಲೆಯ ಮೈನಿಂಗ್ ಇಂಜಿನಿಯರ್ ಅಸೋಸಿಯೇಷನ್ ಆಫ್ ಇಂಡಿಯಾದ ಸದಸ್ಯರು ಶುಕ್ರವಾರದಂದು ಜಿಲ್ಲಾ ಉಸ್ತುವಾರಿ, ಅರಣ್ಯ ಸಚಿವರಾದ ಆನಂದ್ ಸಿಂಗ್ ಅವರ ಕಚೇರಿಗೆ ತೆರಳಿ ಸಚಿವರ ಮುಖಾಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ.2.5 ಲಕ್ಷ ರೂ.ಮೊತ್ತದ ಚೆಕ್ನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಹೊಸಪೇಟೆ ತಹಶೀಲ್ದಾರ್ ಹೆಚ್.ವಿಶ್ವನಾಥ್ ಹಾಗೂ ಅಸೋಸಿಯೇಷನ್ ಸದಸ್ಯರು ಇದ್ದರು