ನವದೆಹಲಿ, ಮೇ 13, ಕೊರೊನಾ ವೈರಸ್ 'ಕೋವಿಡ್ -19' ಕಳೆದ 24 ಗಂಟೆಗಳಲ್ಲಿ ವಿಶ್ವದಾದ್ಯಂತ 4,261 ಜನರ ಬಲಿ ಪಡೆದಿದ್ದು, ಒಟ್ಟು ಸಾವಿನ ಸಂಖ್ಯೆ 2,83,000 ಕ್ಕೆ ಏರಿದೆ.ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಈ ಮಾಹಿತಿಯನ್ನು ಬುಧವಾರ ಬಿಡುಗಡೆ ಮಾಡಿದೆ. ವಿಶ್ವಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ 40,88,848 ತಲುಪಿದೆ ಎಂದು ಡಬ್ಲ್ಯುಎಚ್‌ಒ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 82,591 ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 2,83,153 ಕ್ಕೆ ಏರಿದೆ. ಸೋಂಕಿನ ಹೆಚ್ಚಿನ ಪ್ರಕರಣಗಳು ಯುರೋಪಿನಲ್ಲಿ ವರದಿಯಾಗಿದ್ದು, ಇಲ್ಲಿ ಸೋಂಕಿತರ ಸಂಖ್ಯೆ1,755,790 ಆಗಿದ್ದು, ಒಟ್ಟು 157,880 ಸಾವುಗಳು ಸಂಭವಿಸಿವೆ.ಮಾರ್ಚ್ 11 ರಂದು, ಕರೋನಾ ವೈರಸ್ ಅನ್ನು , ಡಬ್ಲ್ಯುಎಚ್‌ಒ ಜಾಗತಿಕ ಸಾಂಕ್ರಾಮಿಕ ರೋಗ ಎಂದು ಘೋಷಿಸಿತ್ತು.ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಪ್ರಕಾರ, ಒಟ್ಟು 42,47,709 ಕರೋನಾ ಪ್ರಕರಣಗಳು ವರದಿಯಾಗಿದ್ದು, 2,90,838 ಜನರು ಸಾವನ್ನಪ್ಪಿದ್ದಾರೆ ಮತ್ತು 14,85,134 ರೋಗಿಗಳು ಚೇತರಿಸಿಕೊಂಡಿದ್ದಾರೆ.