ಎಂಇಐಎಲ್‍ನಿಂದ ಕರೋನಾ ಪರಿಹಾರ ನಿಧಿಗೆ 2 ಕೋಟಿ ರೂ. ದೇಣಿಗೆ

ಬೆಂಗಳೂರು, ಮಾ, 27,ಇಡೀ ವಿಶ್ವವನ್ನೇ ಬಾಧಿಸುತ್ತಿರುವ ಕರೋನಾ ವೈರಸ್‍ನಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ನಿಭಾಯಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನವಿ ಮೇರೆಗೆ ರಾಷ್ಟ್ರದ ಪ್ರತಿಷ್ಠಿತ ಇನ್ಫ್ರಾಸ್ಟ್ರಕ್ಚರ್ ಸಂಸ್ಥೆ ಎಂಇಐಎಲ್, ಮುಖ್ಯಮಂತ್ರಿಗಳ ಪರಿಹಾರ ನಿಧಿ-ಕೋವಿಡ್19ಗೆ ಎರಡು ಕೋಟಿ ರೂಪಾಯಿಗಳ ದೇಣಿಗೆ ನೀಡಿದೆ.ದೇಶದ ನೀರಾವರಿ, ವಿದ್ಯುತ್, ಇಂಧನ, ವೈಮಾನಿಕ ಸೇರಿದಂತೆ ಹಲವು ಉದ್ದಿಮೆಗಳಲ್ಲಿ ತೊಡಗಿಕೊಂಡಿರುವ ಮೆಗಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಸಂಸ್ಥೆಯು ಕರ್ನಾಟಕ ಮಾತ್ರವಲ್ಲದೆ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಒರಿಸ್ಸಾ ರಾಜ್ಯಗಳಿಗೂ ದೇಣಿಗೆ ನೀಡುವ ಮೂಲಕ ಸಹಾಯ ಹಸ್ತ ಚಾಚಿದೆ.ರಾಜ್ಯದಲ್ಲಿ ಕರೋನಾ ಸೋಂಕಿತರ ಚಿಕಿತ್ಸೆ ಮತ್ತು ಕರೋನಾದಿಂದ ಉದ್ಭವಿಸಿರುವ ಸಂದಿಗ್ಧ ಸ್ಥಿತಿಯನ್ನು ನಿಭಾಯಿಸುತ್ತಿರುವ ಸರ್ಕಾರದ ಕರೆಗೆ ಓಗೊಟ್ಟಿರುವ ಎಂ.ಇ.ಐ.ಎಲ್ ಸಂಸ್ಥೆಯು ಶುಕ್ರವಾರ ಕರ್ನಾಟಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ರೂಪಾಯಿಗಳ ದೇಣಿಗೆಯನ್ನು ಆರ್‍ಟಿಜಿಎಸ್ ಮೂಲಕ ವರ್ಗಾಯಿಸಿದೆ.