ಗಂಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2 ಲಕ್ಷದ ಚೆಕ್ ವಿತರಣೆ
2 lakhs check distribution for renovation of Gangaparameshwari temple
ಲೋಕದರ್ಶನ ವರದಿ
ಕಂಪ್ಲಿ 28: ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ತಳವಾರಪೇಟೆಯ ಗಂಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್‌ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ರಾಜಶ್ರೀ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಎರಡು ಲಕ್ಷ ಮೊತ್ತದ ಚೆಕ್ ವಿತರಿಸಲಾಯಿತು.
ಸಂದರ್ಭದಲ್ಲಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ಮಾತನಾಡಿ, ಭಾರತೀಯ ಪರಂಪರೆಯಲ್ಲಿ ದೇವಸ್ಥಾನಗಳು ಸಂಸ್ಕೃತಿ ಮತ್ತು ಸಂಸ್ಕಾರದ ಪ್ರತೀಕವಾಗಿದ್ದು ಆಧ್ಯಾತ್ಮಿಕತೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುವೆ ಎಂದರು.
ನಂತರ ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಮಾತನಾಡಿ, ಸಂಸ್ಥೆಯು 64 ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ನೀಡುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಶಸಕ್ತ ರನ್ನಾಗಿಸುವುದು ಮೂಲ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಕೃಷಿ ಮೇಲ್ವಿಚಾರಕ ಸಂಜು ಕುಮಾರ್, ವಲಯದ ಮೇಲ್ವಿಚಾರಕ ಮಂಜುನಾಥ್, ಸಂಪನ್ಮೂಲ ವ್ಯಕ್ತಿ ಎಸ್.ರಾಮಪ್ಪ, ಸೇವಾ ಪ್ರತಿನಿಧಿ ಲಕ್ಷ್ಮಿ, ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಕಾಗಿ ಈರಣ್ಣ, ಪ್ರಮುಖರಾದ ಎ.ಜಡೆಪ್ಪ, ಬಡಿಗೇರ್ ವೀರೇಶ್, ಯಮನೂರ್ಪ, ಹೆಚ್.ರಂಗಪ್ಪ, ಜಿ.ಜಡೆಪ್ಪ, ಗಂಗಾಧರ, ನಾಗಪ್ಪ, ಲಕ್ಷ್ಮಿಕಾಂತ ಸೇರಿದಂತೆ ಗಂಗಾ ಮತ ಸಮಾಜದ ಹಿರಿಯರು ಯುವಕರು ಸಮಿತಿಯ ಪದಾಧಿಕಾರಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 