ದಾಂಡೇಲಿಯಿಂದ ಬೆಂಗಳೂರಿಗೆ 2 ಪಲ್ಲಕ್ಕಿ ಬಸ್‌ಗಳ ಸೇವೆ
2 palanquin buses service from Dandeli to Bengaluru
ದಾಂಡೇಲಿ - ಮಾ. 30 : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ದಾಂಡೇಲಿಯಿಂದ ಬೆಂಗಳೂರಿಗೆ 2 ಪಲ್ಲಕ್ಕಿ ಬಸ್‌ಗಳ ಸೇವೆಯನ್ನು ಪ್ರಾರಂಭಿಸಲಾಗಿದೆ. ಈ ಬಸ್‌ಗಳನ್ನು ಸ್ಥಳೀಯ ಶಾಸಕ ಆರ್.ವಿ. ದೇಶಪಾಂಡೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರು ಇತ್ತಿಚಿಗೆ ದಾಂಡೇಲಿಗೆ ಆಗಮಿಸಿದಾಗ ದಾಂಡೇಲಿಯಿಂದ ಬೆಂಗಳೂರಿಗೆ, ಬೆಂಗಳೂರಿನಿಂದ ದಾಂಡೇಲಿಗೆ ಪ್ರಯಾಣಿಕರ ಅನಕೂಲಕ್ಕಾಗಿ ಹವಾನಿಯಂತ್ರಿತ ಎರಡು ಪಲ್ಲಕ್ಕಿ ಬಸ್‌ಗಳನ್ನು ಬಿಡುವ ಭರವಸೆಯನ್ನು ನೀಡಿದ್ದರು. ಅವರು ನೀಡಿದ ಭರವಸೆಯಂತೆ 15 ದಿನದೊಳಗಾಗಿ ಬಸ್ ಸಂಚಾರ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ಉಪಾಧ್ಯಕ್ಷ ಬಶೀರ ಗಿರಿಯಾಳ, ಮಾಜಿ ನಗರಸಭಾ ಅಧ್ಯಕ್ಷ ತಸ್ವರ ಸೌದಾಗರ, ಯಾಸ್ಮೀನ ಕಿತ್ತೂರ, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ರೇಣುಕಾ ಬದಂ , ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ರಿಯಾಜ್ ಬಾಬು ಸೈಯ್ಯದ್, ಉಸ್ಮಾನ ಶೇಖ ಮತ್ತಿತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 