ನವದೆಹಲಿ, ಡಿ 17: ಆಫ್ರಿಕಾದ ಪಶ್ಚಿಮ ಕರಾವಳಿಯಲ್ಲಿ 20 ಭಾರತೀಯರನ್ನು ಕಡಲ್ಗಳ್ಳರು ಅಪಹರಿಸಿದ್ದಾರೆ. ಅಪಹರಣ ವಿಷಯವನ್ನು ಭಾರತೀಯ ಅಧಿಕಾರಿಗಳು, ನೈಜೀರಿಯಾದ ಅಧಿಕಾರಿಗಳಿಗೆ ಗಮನಕ್ಕೆ ತಂದಿದ್ದಾರೆ. ಹಾಂಗ್ ಕಾಂಗ್ ಧ್ವಜವಿದ್ದ ನೌಕೆಯಲ್ಲಿ ಪ್ರಯಾಣಿಸುತ್ತಿದ್ದಾಗ ಭಾರತೀಯರನ್ನು ಅಪಹರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಈ ಘಟನೆ ಸುಮಾರು 10 ದಿನಗಳ ಹಿಂದೆ ನಡೆದಿದ್ದು, ಈಗ ಬೆಳಕಿಗೆ ಬಂದಿದೆ. ಈ ಬಗ್ಗೆ ನೈಜೀರಿಯಾದ ಅಧಿಕಾರಿಗಳೊಂದಿಗೆ ಮಾತನಾಡಿರುವುದಾಗಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ನೈಜೀರಿಯಾದ ಕರಾವಳಿಯಲ್ಲಿ ಈ ವರ್ಷದಲ್ಲಿ ಕಡಲ್ಗಳ್ಳರರಿಂದ ನಡೆದಿರುವ ಮೂರನೇ ಅಪಹರಣ ಇದಾಗಿದೆ.