200 ಕೋಟಿ ರೂ. ವೆಚ್ಚದ ಕಾಮಗಾರಿಗಳ ಗುರಿ
ಬಾಗಲಕೋಟೆ04: ಜಿಲ್ಲೆಯಲ್ಲಿ 2020-21ನೇ ಸಾಲಿಗೆ 200 ಕೋಟಿ ರೂ.ಗಳ ವೆಚ್ಚದ ಉದ್ಯೋಗ ಖಾತರಿ ಕಾಮಗಾರಿಗಳ ಗುರಿ ಹೊಂದಲಾಗಿದೆ ಎಂದು ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಹೇಳಿದರು.
ತಾಲೂಕಿನ ಹಳದೂರ ಗ್ರಾಮ ಪಂಚಾಯತ ವ್ಯಾಪ್ತಿಯ ಬೂದನಗಡದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೆರೆ ಹೂಳು ಕಾಮಗಾರಿ ವೀಕ್ಷಿಸಿ, ಕೂಲಿ ಕಾಮರ್ಿಕರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಅವರು 2019-20ನೇ ಸಾಲಿನಲ್ಲಿ 170 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳ ಗುರಿ ಹೊಂದುವ ಮೂಲಕ ರಾಜ್ಯಕ್ಕೆ 5 ಸ್ಥಾನ ಪಡೆದುಕೊಂಡರೆ, 2020-21ನೇ ಸಾಲಿಗೆ 2 ಅಥವಾ 3ನೇ ಸ್ಥಾನ ಪಡೆದುಕೊಳ್ಳಲಿದೆ ಎಂದು ಸಿಇಓ ತಿಳಿಸಿದರು.
ಬಾಗಲಕೋಟೆ ಜಿಲ್ಲೆಯನ್ನು ಬರ ಜಿಲ್ಲೆಯೆಂದು ಘೋಷಿಸಿದ್ದು, ಜಿಲ್ಲೆಯ ಜನತೆಗೆ ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗ ನೀಡುವ ಮೂಲಕ ದೂರದ ಮಂಗಳೂರು, ಗೋವಾಗಳಿಗೆ ವಲಸೆ ಹೋಗುವದನ್ನು ತಪ್ಪಿಸಲಾಗಿದೆ. ನರೇಗಾ ಯೋಜನೆಯ ವ್ಯಾಪ್ತಿಯಲ್ಲಿ ಸಿಬ್ಬಂದಿ ಹಾಗೂ ಡಾಟಾ ಎಂಟ್ರಿ ಆಪರೇಟರ್ ತೊಂದರೆ ಇದ್ದರೂ ಸಹ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಿಲ್ಲವೆಂದರು. 5 ಕಿ.ಮೀ ಅಂತರ ಮೀರಿ ಬರುವ ಕೂಲಿ ಕಾಮರ್ಿಕರಿಗೆ ಪ್ರಯಾಣ ಭತ್ಯೆಯನ್ನು ಸಹ ನೀಡಲಾಗುತ್ತಿದೆ ಎಂದು ತಿಳಿಸಿದರು.
ಭೇಟಿ ಸಂದರ್ಭದಲ್ಲಿ ಕೂಲಿ ಕಾಮರ್ಿಕರು ಉದ್ಯೋಗದ ಬೇಡಿಕೆ ಸಲ್ಲಿಸಿದ 15 ದಿನಗಳೊಳಲ್ಲೇ ಉದ್ಯೋಗ ನೀಡುವಂತೆ ಮನವಿ ಮಾಡಿಕೊಂಡರು. ಕೂಲಿ ಹಣವನ್ನು ಸಕಾಲದಲ್ಲಿ ಜಮೆ ಆಗುತ್ತಿಲ್ಲವೆಂದು ತಿಳಿಸಿದಾಗ ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ ಸಿಇಓ ಮಾನಕರ ಅವರು ಕೂಲಿಕಾಮರ್ಿಕರ ಬ್ಯಾಂಕ್ ಖಾತೆ ಅಪ್ಡೆಟ್, ಆಧಾರ ನಂಬರ ಜೋಡಣೆ ಬಗ್ಗೆ ಗ್ರಾಮ ಪಂಚಾಯತನಲ್ಲಿ ಖಾತ್ರಿ ಪಡಿಸಲು ತಂಡ ರಚಿಸುವಂತೆ ಹಳದೂರ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಸಾವಿತ್ರಿ ಮಾಶಾಳ ಅವರಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಕೂಲಿ ಕಾಮರ್ಿಕರಿಂದ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಸನ್ಮಾನ ಸ್ವೀಕರಿಸಿ ಅವರ ಜೊತೆ ಊಟ ಮಾಡಿದರು. 300 ಕ್ಕೂ ಹೆಚ್ಚು ಕಾಮರ್ಿಕರು ಇದ್ದರು. ಐಇಸಿ ಕಾರ್ಯಕ್ರಮ ಸಂಯೋಜಕ ನಾಗರಾಜ ರಾಜನಾಳ, ಎಂಐಎಸ್ನ ಉಜ್ವಲ ಸಕ್ರಿ, ಬಾದಾಮಿ ತಾಲೂಕಿನ ಐಇಸಿ ಸಂಯೋಜಕ ಸಮೀರ ಉಮಜರ್ಿ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 