ಆಮ್‌ಸ್ಟರ್‌ಡ್ಯಾಂ ನಿಂದ ಬೆಂಗಳೂರಿಗೆ ಬಂದಿಳಿದ 206 ಅನಿವಾಸಿ ಭಾರತೀಯರು

ಬೆಂಗಳೂರು, ಜೂ 12,ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ನೆದರ್‌ಲ್ಯಾಂಡ್ಸ್‌ನ ರಾಜಧಾನಿ ಆಮ್‌ಸ್ಟರ್‌ಡ್ಯಾಂನಲ್ಲಿ ಸಿಲುಕಿದ್ದ 206 ಅನಿವಾಸಿ ಭಾರತೀಯರು ಶುಕ್ರವಾರ ಬೆಳಗ್ಗೆ 9.15ಕ್ಕೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಬಂದಿಳಿದಿದ್ದಾರೆ.ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಇವರಲ್ಲಿ 2 ಮಕ್ಕಳು, 204 ಪುರುಷರು ಮತ್ತು ಮಹಿಳೆಯರಿದ್ದಾರೆ ಎಂದರು‌. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 206 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೊನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಸದ್ಯ ಅವರೆಲ್ಲರನ್ನೂ ಕ್ವಾರಂಟೈನ್ ಗೆ ಕಳುಹಿಸಿಕೊಡಲಾಗಿದೆ ಎಂದು  ಅವರು ಮಾಹಿತಿ ನೀಡಿದರು.