ಜಿಲ್ಲೆಯ 21 ಎಫ್‌ಪಿಒ ಕೇಂದ್ರದಿಂದ 1.80 ಕೋಟಿ ರೂ. ಅನುದಾನ: ಸಂಸದ ಈರಣ್ಣ ಕಡಾಡಿ
21 FPO centers in the district receive Rs. 1.80 crore in grant: MP Iranna Kadadi
ಬೆಳಗಾವಿ 23: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬೆಳಗಾವಿ ಜಿಲ್ಲೆಯ ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಬದ್ಧವಾಗಿದ್ದು, ‘10,000 ಎಫ್‌ಪಿಒಗಳ ರಚನೆ ಮತ್ತು ಉತ್ತೇಜನ’ ಯೋಜನೆಯಡಿ ಜಿಲ್ಲೆಯಲ್ಲಿ 21 ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ ಮತ್ತು ಜಿಲ್ಲೆಯ 17 ಎಫ್‌ಪಿಒಗಳಿಗೆ ಒಟ್ಟು 1.80 ಕೋಟಿ ರೂ. ಈಕ್ವಿಟಿ ಗ್ರಾಂಟ್ ನೀಡಲಾಗಿದೆ. ಅಲ್ಲದೆ, 4 ಅರ್ಹ ಎಫ್‌ಪಿಒಗಳಿಗೆ 34.48 ಲಕ್ಷ ರೂ. ಸಾಲದ ಸೌಲಭ್ಯವನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ.
ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಎಫ್‌ಪಿಒ ಗಳ ರಚನೆ ಮತ್ತು ಕಾರ್ಯವೈಖರಿ ಕುರಿತು ಕೇಳಿದ ಪ್ರಶ್ನಗೆ ಉತ್ತರಿಸಿದ ಸಚಿವರು ಈ ಸಂಸ್ಥೆಗಳು ಪ್ರಸ್ತುತ ಧಾನ್ಯಗಳು, ಬೇಳೆಕಾಳುಗಳು, ಎಣ್ಣೆಕಾಳುಗಳು, ಕಬ್ಬು ಮತ್ತು ತೋಟಗಾರಿಕಾ ಬೆಳೆಗಳ ಸಂಗ್ರಹಣೆ ಹಾಗೂ ಪ್ರಾಥಮಿಕ ಸಂಸ್ಕರಣಾ ಚಟುವಟಿಕೆಗಳಲ್ಲಿ ಹಾಗೂ ಮಾರಾಟದಲ್ಲಿ ತೊಡಗಿಸಿಕೊಂಡಿವೆ. ರೈತರು ತಮ್ಮ ಬೆಳೆಗಳಿಗೆ ತಾವೇ ಬೆಲೆ ನಿಗದಿಪಡಿಸಲು ಅನುಕೂಲವಾಗುವಂತೆ ಆನ್‌ಲೈನ್ ಮೂಲಕ ದೇಶಾದ್ಯಂತ ವ್ಯಾಪಾರ ಮಾಡಲು 10 ಎಫ್‌ಪಿಒಗಳನ್ನು ಇ-ನಾಮ್ (ರಾಷ್ಟ್ರೀಯ ಕೃಷಿ ಮಾರುಕಟ್ಟೆ) ವೇದಿಕೆಗೆ ಜೋಡಿಸಲಾಗಿದೆ.
ಈ ಎಫ್‌ಪಿಒ ಗಳಿಗೆ ಆನ್‌ಲೈನ್ ವ್ಯಾಪಾರದ ಬಗ್ಗೆ ವಿಶೇಷ ತರಬೇತಿ ನೀಡಲಾಗಿದೆ.ಕೃಷಿ ಚಟುವಟಿಕೆಗಳಲ್ಲಿ ಯಾಂತ್ರೀಕರಣವನ್ನು ಹೆಚ್ಚಿಸುವುದು ಮತ್ತು ಸಣ್ಣ ಹಾಗೂ ಅತಿಸಣ್ಣ ರೈತರಿಗೆ ದುಬಾರಿ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆಗೆ ಪಡೆಯಲು ಅನುಕೂಲವಾಗುವಂತೆ ಎಫ್‌ಪಿಒಗಳ ಮೂಲಕ ಕಸ್ಟಮ್ ಹೈರಿಂಗ್ ಸೆಂಟರ್ ಸ್ಥಾಪಿಸಲು ಸರ್ಕಾರ ಉತ್ತೇಜನ ನೀಡುತ್ತಿದೆ ಮತ್ತು ಕೃಷಿ ಮೂಲಸೌಕರ್ಯ ನಿಧಿ ಅಡಿಯಲ್ಲಿ ಸಂಸ್ಕರಣಾ ಘಟಕಗಳು ಮತ್ತು ಚಟುವಟಿಕೆ ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರವು ಸಬ್ಸಿಡಿ ಮತ್ತು ಬಡ್ಡಿ ರಿಯಾಯಿತಿ ಸಾಲದ ನೆರವು ನೀಡುತ್ತಿದೆ.
ಬೆಳಗಾವಿ ಜಿಲ್ಲೆಯ ರೈತ ಸಮುದಾಯವು ಕೇವಲ ಸಾಂಪ್ರದಾಯಿಕ ಕೃಷಿಗೆ ಸೀಮಿತವಾಗದೆ, ತಾಂತ್ರಿಕವಾಗಿ ಮತ್ತು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಮೂಲ ಉದ್ದೇಶವಾಗಿದೆ. ರೈತ ಉತ್ಪಾದಕ ಸಂಸ್ಥೆಗಳ ) ಮೂಲಕ ರೈತರು ಒಗ್ಗೂಡಿ ಬೆಳೆ ಬೆಳೆಯುವುದರಿಂದ ಮತ್ತು ಮಾರುಕಟ್ಟೆಯಲ್ಲಿ ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ವ್ಯಾಪಾರ ಮಾಡುವುದರಿಂದ ರೈತರ ಆದಾಯವನ್ನು ದುಪ್ಪಟ್ಟುಗೊಳಿಸಲು ಸಾಧ್ಯವಿದೆ. ಜಿಲ್ಲೆಯ ಪ್ರತಿಯೊಬ್ಬ ರೈತರು ಈ ಯೋಜನೆಗಳ ಲಾಭ ಪಡೆದು ಆರ್ಥಿಕ ಪ್ರಗತಿ ಸಾಧಿಸಬೇಕೆಂದು ಸಚಿವರು ಮಾಹಿತಿ ನೀಡಿದ್ದಾರೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 