ತೆಲಂಗಾಣದಲ್ಲಿ ಪ್ರಯಾಣಿಕರ ಬಸ್ ಪಲ್ಟಿ: 21 ಮಂದಿಗೆ ಗಾಯ
21 Injured as Travel Bus Overturns on NH-44 in Telangana
ಮಹಬೂಬ್‌ನಗರ, ಆ. 14 : ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ಭೂತಪುರ ಮಂಡಲದಲ್ಲಿ ರಾಷ್ಟ್ರೀಯ ಹೆದ್ದಾರಿ-44ರಲ್ಲಿ (ಹೈದರಾಬಾದ್-ಬೆಂಗಳೂರು) ಖಾಸಗಿ ಟ್ರಾವೆಲ್ಸ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 21 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
36 ಪ್ರಯಾಣಿಕರನ್ನು ಹೊತ್ತಿದ್ದ ಬಸ್ ಹೈದರಾಬಾದ್‌ನಿಂದ ಅರುಣಾಚಲಂ ಕಡೆಗೆ ತೆರಳುತ್ತಿದ್ದಾಗ ಗುರುವಾರ ರಾತ್ರಿ ಈ ಅಪಘಾತ ಸಂಭವಿಸಿದೆ.
ಗಾಯಗೊಂಡವರನ್ನು ತಕ್ಷಣವೇ ಮಹಬೂಬ್‌ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳಿಕ ಹೈದರಾಬಾದ್‌ಗೆ ಸ್ಥಳಾಂತರಿಸಲಾಯಿತು.
ಅಪಘಾತದ ಬಳಿಕ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರೇನ್ ಸಹಾಯದಿಂದ ಪಲ್ಟಿಯಾಗಿದ್ದ ಬಸ್ ಅನ್ನು ತೆರವುಗೊಳಿಸಲಾಯಿತು.
ಅತಿವೇಗದ ಚಾಲನೆ ಹಾಗೂ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 