ಭಾರತದಲ್ಲಿದ್ದ 210 ಆಸ್ಟ್ರೇಲಿಯಾ ಪ್ರಜೆಗಳು ಸಿಡ್ನಿಗೆ ಪ್ರಯಾಣ
ಚೆನ್ನೈ, ಮೇ 20, ಕೊರೊನಾ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಸಿಕ್ಕಿಹಾಕಿಕೊಂಡಿದ್ದ 210 ಆಸ್ಟ್ರೇಲಿಯಾ ದೇಶದ ಪ್ರಜೆಗಳು ವಿಶೇಷ ವಿಮಾನದಲ್ಲಿ ಚೆನ್ನೈನ ಅಣ್ಣಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಡ್ನಿಗೆ ಇಂದು ಪ್ರಯಾಣಿಸಲಿದ್ದಾರೆ.ವಿಮಾನ ನಿಲ್ದಾಣದ ಮೂಲಗಳ ಪ್ರಕಾರ ಆಸ್ಟ್ರೇಲಿಯ ದೇಶದ ಪ್ರಜೆಗಳಲ್ಲಿ 62 ಪುರುಷರು, 78 ಮಹಿಳೆಯರು, 48 ಮಕ್ಕಳು, ಹಾಗೂ 22 ಶಿಶುಗಳು ಪ್ರಯಾಣ ಬೆಳೆಸಿದ್ದಾರೆ. ಅವರೆಲ್ಲರೂ ತಮಿಳುನಾಡು, ಕೇರಳ ಆಂಧ್ರಪ್ರದೇಶ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪಾಂಡಿಚೇರಿಯಲ್ಲಿ ಲಾಕ್‌ಡೌನ್‌ನಿಂದಾಗಿ ಸಿಲುಕಿಕೊಂಡಿದ್ದರು.
ಅವರಲ್ಲಿ ಕೆಲವರು ಕಾರ್ಪೋರೇಟ್ ಸಂಸ್ಥೆಗಳಲ್ಲಿ ದುಡಿಯುತ್ತಿರುವವರು, ಕೆಲವರು ಶೈಕ್ಷಣಿಕ ಹಾಗೂ ಪ್ರವಾಸಿ ವೀಸಾಗಳಲ್ಲಿ ಬಂದವರಾಗಿದ್ದರು.ಈ ಬಗ್ಗೆ ಭಾರತದ ಆಸ್ಟ್ರೇಲಿಯಾ ರಾಯಭಾರ ಕಚೇರಿ ಕೇಂದ್ರ ಸರ್ಕಾರದ ಗಮನ ಸೆಳೆದ ನಂತರ ಅವರಿಗೆ ಅವರ ದೇಶಕ್ಕೆ ಪ್ರಯಾಣಿಸಲು ವ್ಯವಸ್ಥೆ ಮಾಡಲಾಗಿದೆ. ರಾಯಭಾರ ಕಚೇರಿಯ ಅಧಿಕಾರಿಗಳು ವಿಶೇಷ ವಿಮಾನ ಹಾರಾಟಕ್ಕೆ ಅನುಮತಿ ಪಡೆದ ನಂತರ ನಿನ್ನೆ ಸಂಜೆ ಮೆಲ್ಬೋರ್ನ್‌ನಿಂದ ವಿಮಾನ ಭಾರತಕ್ಕೆ ಬಂದಿತ್ತು.ಭಾರತದಲ್ಲಿ ಸಿಲುಕಿಕೊಂಡಿದ್ದ ಎಲ್ಲ ಪ್ರಯಾಣಿಕರನ್ನು ವಿಮಾನ ನಿಲ್ದಾಣಕ್ಕೆ ಕರೆತರಲಾಯಿತುಅಲ್ಲಿ ಅವರ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಮಧ್ಯಾಹ್ನ ಮೂರು ಗಂಟೆಗೆ ವಿಮಾನ ಸಿಡ್ನಿಗೆ ಹೊರಟಿದೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 