ನವದೆಹಲಿ 12: ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2100 ರೂಪಾಯಿಗಳನ್ನು ಜಮೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಮಂದಿನ ಚುನಾವಣೆಯಲ್ಲಿ ನಮ್ಮದೇ ಸರಕಾರ ಅಧಿಕಾರಕ್ಕೆ ಬಂದರೆ ದೆಹಲಿಯಲ್ಲಿರುವ ಹದಿನೆಂಟು ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಮಹಿಳೆಯರ ಖಾತೆಗೆ 2100 ರೂಪಾಯಿ ಖಾತೆಗೆ ಜಮೆ ಮಾಡುವುದಾಗಿ ಹೇಳಿದ್ದಾರೆ.
ಹದಿನೆಂಟು ವರ್ಷ ಮೇಲ್ಪಟ್ಟ ಮಹಿಳೆಯರ ಖಾತೆಗೆ ಹಣ ಜಮೆಯಾಗಬೇಕಾದರೆ ಮಹಿಳಾ ಸಮ್ಮಾನ್ ಯೋಜನೆಗೆ ನೋಂದಣಿ ಮಾಡಿಕೊಳ್ಳಬೇಕು, ನೋಂದಣಿ ಮಾಡಿದರೆ ಮಾತ್ರ ಖಾತೆಗೆ ಹಣ ಜಮೆಯಾಗಲಿದೆ ಎಂದು ಹೇಳಿದರು. ಶುಕ್ರವಾರದಿಂದ ನೋಂದಣಿ ಆರಂಭಗೊಳ್ಳಲಿದ್ದು ಮಹಿಳೆಯರು ಆದಷ್ಟು ಬೇಗ ನೋಂದಣಿ ಮಾಡಿಕೊಳ್ಳಿ ಎಂದು ವಿನಂತಿಸಿದ್ದಾರೆ.