ಸಿಂದಗಿಯಲ್ಲಿ 21ನೇ ಕನ್ನಡ ಸಾಹಿತ್ಯ ಸಮ್ಮೇಳನ: ಅಕ್ಷರ ಜಾತ್ರೆಗೆ ಸಿದ್ಧತೆ
21st Kannada Literary Conference in Sindagi: Preparations for the literary festival
ಲೋಕದರ್ಶನ ವರದಿ
ಸಿಂದಗಿ 18: ಇದೇ ಜುಲೈ 21 ಮತ್ತು 22ರಂದು ಸಿಂದಗಿ ಪಟ್ಟಣದಲ್ಲಿ ನಡೆಯಲಿರುವ ವಿಜಯಪುರ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಕ್ಷರ ಜಾತ್ರೆಯಂತೆ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ನಾಡು-ನುಡಿ, ನೆಲ, ಜಲ ಹಾಗೂ ಭಾಷೆಯ ಸಂರಕ್ಷಣೆ ಮತ್ತು ಬೆಳವಣಿಗೆಯಲ್ಲಿ ಸಾಹಿತ್ಯ ಸಮ್ಮೇಳನಗಳು ಮಹತ್ವದ ಪಾತ್ರ ವಹಿಸುತ್ತವೆ. ಹಿರಿಯರ ಸಾಹಿತ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದರು.
ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಜಿಲ್ಲೆಯ ಹಿರಿಯ ಸಾಹಿತಿ ಹ.ಮ. ಪೂಜಾರ ಅವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಶಾಸಕರು, ಶಿಕ್ಷಣ ತಜ್ಞರು, ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಸುಮಾರು 15 ವರ್ಷಗಳ ಬಳಿಕ ಮತ್ತೆ ಸಿಂದಗಿ ಪಟ್ಟಣದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಈ ಬಾರಿ ಸಮ್ಮೇಳನವನ್ನು ವಿಶೇಷವಾಗಿ ಆಯೋಜಿಸಲಾಗಿದೆ. ಜುಲೈ 21ರಂದು ಎರಡು ಸಾವಿರ ಮಹಿಳೆಯರಿಂದ ಕುಂಭಮೇಳ, ಕವಿಗೋಷ್ಠಿ ಹಾಗೂ ಜುಲೈ 22ರಂದು ಭಾವೈಕ್ಯತೆಯ ಸಂಕೇತವಾಗಿ ಎರಡು ಸಾವಿರ ಮಹಿಳೆಯರಿಂದ ಬುಟ್ಟಿ ಜಾತ್ರೆ, ಎತ್ತಿನ ಬಂಡಿಗಳ ಮೇಲೆ ಜ್ಞಾನಪೀಠ ಪುರಸ್ಕೃತರ ಮೆರವಣಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕನ್ನಡ ವಿಜಯಪುರ ಜಿಲ್ಲಾ 21ನೇ ಸಾಹಿತ್ಯ ಸಮ್ಮೇಳನಕ್ಕಾಗಿ ಎಚ್.ಜಿ. ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದ್ದು, ಮದುವಣಗಿತ್ತಿಯಂತೆ ಪಟ್ಟಣವನ್ನು ಸಜ್ಜುಗೊಳಿಸಲಾಗುತ್ತಿದೆ. ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಕ್ಷರ ಜಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕಾನೂನು ಸಲಹೆಗಾರ ಅಶೋಕ ಗಾಯಕ್ವಾಡ, ಗೌರವಾಧ್ಯಕ್ಷ ಮಹಾಂತೇಶ ಪಟ್ಟಣಶೆಟ್ಟಿ, ತಾಲೂಕಾಧ್ಯಕ್ಷ ವೈ.ಸಿ. ಮಯೂರ, ಮಲ್ಲಣ್ಣ ಸಾಳಿ, ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಸುನಂದಾ ಯಂಪೂರೆ, ಶೈನಾಬಿ ಮಸಳಿ, ವರ್ಷಾ ಪಾಟೀಲ, ಶಾರದಾ ಬೆಟಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 