ಕೊಪ್ಪಳ 26: ಕೊಪ್ಪಳ ಜಿಲ್ಲಾ ಪಂಚಾಯತ್ ಪ್ರಸಕ್ತ ಸಾಲಿನ ಕ್ರೀಯಾ ಯೋಜನೆಗೆ 228.94 ಕೋಟಿ ರೂಗಳ ಆಥರ್ಿಕ ಅನುಮೋಧನೆ ನೀಡಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥರೆಡ್ಡಿ ಅವರು ತಿಳಿಸಿದರು.
ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಬುಧವಾರದಂದು ನಡೆದ ಜಿ.ಪಂ. ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಹಳ್ಳಿಗಳಲ್ಲಿ ನೀರಿನ ಸಮಸ್ಯೆಯಿಂದಾಗಿ ಜನರಿಗೆ ತುಂಬಾ ಸಮಸ್ಯೆ ಉಂಟಾಗುತ್ತಿದ್ದು, ಈ ನಿಟ್ಟಿನಲ್ಲಿ ತ್ವರಿತವಾಗಿ ನೀರಿನ ಸಮಸ್ಯೆಯನ್ನು ನಿವಾರಿಸುವಂತೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗೆ ಸೂಚನೆ ನೀಡಲಾಗಿದೆ. ಆದರೆ ಈ ಸಮಸ್ಯೆಗಳಿ ಅಧಿಕಾರಿಗಳು ಸ್ಪಂಧಿಸುತ್ತಿಲ್ಲ. ನೀರಿನ ಸಮಸ್ಯೆ ಯಾವ ಭಾಗಗಳಲ್ಲಿದೆ ಎಂಬ ಮಾಹಿತಿ ಪಡೆದು ಕೂಡಲೇ ಅಧಿಕಾರಿಗಳು ನೀರಿನ ಸಮಸ್ಯೆ ಇರುವಂತಹ ಗ್ರಾಮಗಳಿಗೆ ಭೇಟಿ ಕೊಟ್ಟು ಕುಡಿಯುವ ನೀರಿನ ಘಟಕಗಳ ಪ್ರಾರಂಭಕ್ಕೆ ಶ್ರಮೀಸಬೇಕು. ಈ ಕುರಿತು ಸದಸ್ಯರು ಸಮಸ್ಯೆಗಳ ಬಗ್ಗೆ ತಮ್ಮ ಇಲಾಖೆಯ ಗಮನಕ್ಕೆ ತಂದರು ಅಧಿಕಾರಿಗಳು ಇದಕ್ಕೆ ಸ್ಪಂಧಿಸುತ್ತಿಲ್ಲ ಎಂಬುವುದು ಎಲ್ಲಾ ಸದಸ್ಯರ ಆರೋಪವಾಗಿದೆ. ಇದೇ ರೀತಿ ಮುಂದುವರೆದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಯಾವ-ಯಾವ ಗ್ರಾಮೀಣ ಪ್ರದೇಶಗಳಲ್ಲಿ ಆರ್ಓ ಪ್ಲಾಂಟ್ಗಳನ್ನು ಸ್ಥಾಪಿಸಲಾಗುತ್ತಿದೆ ಎಂಬುವುದರ ಬಗ್ಗೆ ಇಲಾಖೆಯ ಜೆಇ ಗಳು ಮಾಹಿತಿ ಪಡೆದುಕೊಳ್ಳಬೇಕು. ಎಲ್ಲಾ ಎಇಇ ಗಳು ತಮ್ಮ ವ್ಯಾಪ್ತಿಯ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ. ಕೆಲ ನೀರಿನ ಘಟಕಗಳು ಸ್ಥಗಿತಗೊಂಡಿದ್ದು, ಶೀಘ್ರ ಅವುಗಳ ದುರಸ್ಥಿ ಕಾರ್ಯವನ್ನು ಸಂಬಂಧಿಸಿದ ಕಂಪನಿಗಳಿಂದ ಕೈಗೊಂಡು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುವಂತೆ ಮಾಡಿ ಎಂದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸೌಲಭ್ಯದಿಂದ ನಮ್ಮ ಜಿಲ್ಲೆಯ ಅರ್ಹ ರೈತರು ವಂಚಿತರಾಗಬಾರದು. ಈ ದಿಶೆಯಲ್ಲಿ ಕೃಷಿ ಇಲಾಖೆಯವರು ರೈತರಿಗೆ ಜಾಗೃತಿ ಮೂಡಿಸಿ ರೈತರ ನೋಂದಣಿಗೆ ಸಹಕರಸಬೇಕು. ಹಾಗೂ ಜಿಲ್ಲೆಯ ರೈತ ಸಂಪರ್ಕ ಕೇಂದ್ರ, ಬಾಪೂಜಿ ಸೇವಾ ಕೇಂದ್ರ ಅಥವಾ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ ಮತ್ತು ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಿ ಎಂದರು.
ಜಂಟಿ ಕೃಷಿ ನಿದರ್ೇಶಕಿ ಶಬಾನಾ ಎಂ. ಶೇಖರವರು ಮಾತನಾಡಿ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯ ಅರ್ಹ ರೈತರು ನೋಂದಾಯಿಸಿಕೊಳ್ಳುವಂತೆ ಈಗಾಗಲೇ ಪ್ರಚಾರ ಮಾಡಲಾಗುತ್ತಿದೆ ಹಾಗೂ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯ 232125 ರೈತರಲ್ಲಿ ಈಗಾಗಲೇ ಅರ್ಧಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ``ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ' ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಕೃಷಿ ಇಲಾಖೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಸಿರಿಧಾನ್ಯಗಳ ಪ್ರದೇಶ ವಿಸ್ತರಣೆ ಹಾಗೂ ಉತ್ಪಾದನೆ ವೃದ್ಧಿಸಲು ಮತ್ತು ಸಿರಿಧಾನ್ಯ ಸಂಸ್ಕರಣ ಘಟಕಗಳ ಸ್ಥಾಪನೆಗೆ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರಿಗೆ 10 ಸಾವಿರ ನಗದು ಪ್ರೋತ್ಸಾಹಧನವನ್ನು ರೈತರ ಬ್ಯಾಂಕ ಖಾತೆಗೆ ವಗರ್ಾವಣೆ ಮಾಡುವ ಮೂಲಕ ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹಿಸುವಂತಹ ಕಾರ್ಯಕ್ರಮವನ್ನು ಇಲಾಖೆಯಿಂದ ಆಯೋಜಿಸಲಾಗಿದೆ. ಅಲ್ಲದೇ ಜಿಲ್ಲೆಯಾದ್ಯಂತ ಕೃಷಿ ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ಹೋಬಳಿ ಮಟ್ಟದಲ್ಲಿ ಏರ್ಪಡಿಸಿ ಜಿಲ್ಲೆಯ ಎಲ್ಲಾ ರೈತರಿಗೆ ಜಾಗೃತಿ ಮೂಡಿಸಲು ಇಲಾಖೆ ಶ್ರಮಿಸಿದೆ ಎಂದು ಸಭೆಗೆ ಮಹಿತಿ ನೀಡಿದರು.
ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಮೇವು ಬ್ಯಾಂಕ್ ಹಾಗೂ ಗೋಶಾಲೆಗಳ ಪ್ರಾರಂಭದಿಂದ ಜಿಲ್ಲೆಯ ರೈತರಿಗೆ ಯಾವ ರೀತಿಯಲ್ಲಿ ಲಾಭವಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಅಗತ್ಯವಿದ್ದ ಕಡೆ ಗೋಶಾಲೆಯನ್ನು ಪ್ರಾರಂಭಿಸಬೇಕು. ಮೇವು ಬ್ಯಾಂಕ್ನಿಂದ ರೈತರು ಮೇವನ್ನು ತೆಗೆದು ಕೊಂಡು ಹೋಗುವ ಕಾರ್ಯಕ್ಕೆ ಯಾವ ರೀತಿಯಲ್ಲಿ ಸ್ಪಂಧನೆದೊರೆತಿದೆ. ಗೋಶಾಲೆಗಳಲ್ಲಿ ಜಾನುವಾರುಗಳಿಗೆ ಅಗತ್ಯ ನೀರು ಮೇವು ಪೂರೈಕೆ ಯಾಗುತ್ತಿದೆಯೇ ಎಂದು ಜಿ.ಪಂ. ಅಧ್ಯಕ್ಷ ಹೆಚ್.ವಿಶ್ವನಾಥರೆಡ್ಡಿ ಪಶು ಇಲಾಖೆ ಅಧಿಕಾರಿಗಳಿಗೆ ಪ್ರಶ್ನಿಸಿದರು.
ಪಶು ಪಾಲನಾ ಮತ್ತು ಪಶು ಸಂಗೋಪನಾ ಇಲಾಖೆ ಉಪನಿದರ್ೇಶಕ ಡಾ. ಬಸಯ್ಯ ಸಾಲಿರವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಏಳು ಗೋಶಾಲೆಗಳನ್ನು ಪ್ರಾರಂಭಿಸಲಾಗಿದ್ದು, ಸುಮಾರು 3600 ಜಾನುವಾರುಗಳು ಇದರ ಸೌಲಭ್ಯ ಪಡೆಯುವಂತಾಗಿದೆ. ಜಿಲ್ಲೆಯಲ್ಲಿ ಮೇವು ಬ್ಯಾಂಕ್ಗಳನ್ನು ಪ್ರಾರಂಭಿಸಿದ್ದು, ಕನರ್ಾಟಕ ರಾಜ್ಯದಲ್ಲಿಯೇ ಪ್ರಥಮವಾಗಿ ಮೇವು ಬ್ಯಾಂಕ್ಗಳನ್ನು ಜನೆವರಿಯಲ್ಲಿ ಸ್ಥಾಪಿಸಿರುವ ಕೀತರ್ಿ ಕೊಪ್ಪಳ ಪಡೆದುಕೊಂಡಿದೆ. ಈ ಮೇವು ಬ್ಯಾಂಕುಗಳಲ್ಲಿ ಸಕರ್ಾರವು ನಿಗದಿಪಡಿಸಿದ ಪ್ರತಿ ಕೆಜಿ ಮೇವಿಗೆ ರೂ. 2 ದರದಂತೆ ರೈತರಿಗೆ ಇಲ್ಲಿಯವರೆಗ 67.109 ಮೆಟ್ರಿಕ್ ಟನ್ರಷ್ಟು ಮೇವನ್ನು ಒದಗಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿ.ಪಂ. ಉಪಕಾರ್ಯದಶರ್ಿ ಎನ್.ಕೆ. ತೊರವಿ ಅವರು ಕೊಪ್ಪಳ ಜಿಲ್ಲಾ ಪಂಚಾಯತ್ ಪ್ರಸಕ್ತ ಸಾಲಿನ 228.94 ಕೋಟಿ ರೂಗಳ ಕ್ರೀಯಾ ಯೋಜನೆಗೆ ಆಥರ್ಿಕ ಅನುಮೋಧನೆ ನೀಡುವಂತೆ ಸಭೆ ಕೋರಿದರು. ನಂತರ ಸಭೆಯಲ್ಲಿ ಜಿ.ಪಂ. ಪ್ರಸಕ್ತ ಸಾಲಿನ ಕ್ರೀಯಾ ಯೋಜನೆಗೆ ಅನುಮೋಧನೆಯನ್ನು ನೀಡಲಾಯಿತು. ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ರತ್ನವ್ವ ಭರಮಪ್ಪ ನಗರ, ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ ಹಾಗೂ ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.