24 ವರ್ಷಗಳ ಬಳಿಕ ಹುತಾತ್ಮ ಯೋಧನ ಕುಟುಂಬಕ್ಕೆ ನಿವೇಶನ ಹಂಚಿಕೆ
ಬೆಂಗಳೂರು, ಏ.8, ನಾಗಲ್ಯಾಂಡ್‌ನಲ್ಲಿ 24 ವರ್ಷಗಳ ಹಿಂದೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ರಾಜ್ಯದ ಸೈನಿಕ ಎ.ಮುನಿಯಪ್ಪನ್ ಅವರ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಉಚಿತವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ.ಸೈನಿಕ ಕಲ್ಯಾಣ ಇಲಾಖೆಯ ಶಿಫಾರಸಿನ ಮೇರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 30*40 ಅಡಿ ಅಳತೆಯ ನಿವೇಶನ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹುತಾತ್ಮರ ಪತ್ನಿ ಎಂ.ದೇವಿ ಅವರಿಗೆ ಪತ್ರ ಬರೆದು ವಿಷಯ ತಿಳಿಸಿದ್ದಾರೆ. ಇದರೊಂದಿಗೆ ಆದೇಶ ಪ್ರತಿಯನ್ನು ಕೂಡ ಕಳುಹಿಸಿಕೊಟ್ಟಿದ್ದಾರೆ.ನಿಮ್ಮ ಪತಿ ಸಿಪಾಯಿ ಎ.ಮುನಿಯಪ್ಪನ್ ಅವರು ನಾಗಾಲ್ಯಾಂಡ್‌ನಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ 24 ವರ್ಷಗಳ ಹಿಂದೆಯೇ ಮೃತಪಟ್ಟಿದ್ದು, ತಾವು ಕೂಡ ಈಗ ತೀವ್ರ ಅನಾರೋಗ್ಯ ಪೀಡಿತರಾಗಿರುವ ವಿಷಯ ತಿಳಿದು ಅತ್ಯಂತ ದುಃಖವಾಯಿತು. ಭಗವಂತ ನಿಮಗೆ ಆಯುರಾರೋಗ್ಯ ನೀಡಿ ರಕ್ಷಿಸಲಿ ಎಂದು ಪ್ರಾರ್ಥಿಸುತ್ತೇನೆ .ದೇಶ ಸೇವೆಗೆ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮುನಿಯಪ್ಪನ್ ಅವರ ತ್ಯಾಗ ಸ್ಮರಣೀಯ. ತಾವು ನಿವೇಶನ ಹಂಚಿಕೆಯಾಗದೆ ತೊಂದರೆ ಅನುಭವಿಸುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿ ತರಿಸಿ ಪರಿಶೀಲಿಸಿದಾಗ ತಮಗೆ ನಿವೇಶನ ಹಂಚಿಕೆಯಾಗಿರುವುದು ತಿಳಿದುಬಂದಿದೆ. ನಿವೇಶನ ಮಂಜೂರಾತಿ ಪತ್ರ ಇದರೊಂದಿಗೆ ಲಗತ್ತಿಸಿ ಕಳುಹಿಸಲಾಗಿದೆ. ತಮಗೆ, ತಮ್ಮ ಕುಟುಂಬದವರಿಗೆ ಮತ್ತೊಮ್ಮೆ ಶುಭ ಹಾರೈಕೆಗಳು ಎಂದು ಮುಖ್ಯಮಂತ್ರಿ ಪತ್ರದಲ್ಲಿ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 