ಬೆಂಗಳೂರು, ಏ 10,ಕೋವಿಡ್- 19 ವಿರುದ್ಧದ ಹೋರಾಟಕ್ಕೆ ಬೆಂಗಳೂರು ಟರ್ಫ್ ಕ್ಲಬ್ ಲಿ. (ಬಿಟಿಡಿ) ಅಧ್ಯಕ್ಷ ಮತ್ತು ಹಿರಿಯ ಸ್ಟೆವರ್ಡ್ ಡಿ.ವಿನೋದ್ ಸಿವಪ್ಪ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂ. ನೆರವು ನೀಡಿದ್ದಾರೆ. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಸಿವಪ್ಪ, ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಿವಕುಮಾರ್ ಖೆನಿ, ಹರಿಮೋಹನ್ ನಾಯ್ಡು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು ಎಂದು ಕ್ಲಬ್ ನ ಪ್ರಕಟಣೆ ತಿಳಿಸಿದೆ.