ಪತ್ರಕರ್ತರಿಗೆ 25 ಲಕ್ಷ ರೂ. ಜೀವ ವಿಮಾ ಸೌಲಭ್ಯ ಕಲ್ಪಿಸಲು ಕುಮಾರಸ್ವಾಮಿ ಒತ್ತಾಯ

ಬೆಂಗಳೂರು, ಏ.28,ಮಾರಕ ಕೊರೊನಾ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ. ತಮ್ಮ ಜೀವ ಅಪಾಯದಲ್ಲಿದ್ದರೂ ಲೆಕ್ಕಿಸದೇ ಜನರಿಗೆ ಕೊರೊನಾ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಮುದ್ರಣ ಹಾಗೂ ದೃಶ್ಯ ಮಾಧ್ಯಮದ ಪತ್ರಕರ್ತರಿಗೆ ಕನಿಷ್ಠ ಇಪ್ಪತ್ತೈದು ಲಕ್ಷ ರೂಪಾಯಿಗಳ ವಿಶೇಷ ಜೀವ ವಿಮಾ ಸೌಲಭ್ಯವನ್ನು ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.ಈ ಬಗ್ಗೆ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಅವರು, ಕೊರೋನಾ ವಿರುದ್ಧ ಪತ್ರಕರ್ತರು ಕೂಡ ಹೋರಾಡುತ್ತಿದ್ದಾರೆ. ಅವರಿಗೆ ಜೀವನ ಭದ್ರತೆ ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ತಿಳಿಸಿದ್ದಾರೆ.