ಕಾರಂಜಿಮಠದ 26ನೇ ವಾರ್ಷಿಕೋತ್ಸವ, ಕನ್ನಡ ರಾಜ್ಯೋತ್ಸವ
26th anniversary of Karanji Math, Kannada Rajyotsava
ಬೆಳಗಾವಿ 28: ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ಕಾರಂಜಿಮಠದ 26ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಹಾಗೂ ಪ್ರವಚನ ಕಾರ್ಯಕ್ರಮವು ಕಾರಂಜಿಮಠದ ಪೀಠಾಧಿಪತಿ ಗುರುಸಿದ್ಧ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಶನಿವಾರ ದಿ. 1ರಿಂದ 5ರವರೆಗೆ ಪ್ರತಿದಿನ ಸಾಯಂಕಾಲ 6 ಗಂಟೆಗೆ ಜರುಗುವುದು.
ದಿ. 1ರಂದು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜರುಗುವುದು. ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯದಲ್ಲಿ ಶೇಗುಣಸಿ ವಿರಕ್ತಮಠದ ಡಾ. ಮಹಾಂತಪ್ರಭು ಸ್ವಾಮಿಗಳು ನೇತೃತ್ವ ವಹಿಸಿದರು. ಕಾರಂಜಿಮಠದ ಉತ್ತರಾಧಿಕಾರಿ ಡಾ. ಶಿವಯೋಗಿದೇವರ ಸಮ್ಮುಖದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಆಗಮಿಸುವರು. ಖ್ಯಾತ ಪ್ರವಚನಕಾರ ವೀರೇಶ ಪಾಟೀಲ ಅವರು ಐದು ದಿನಗಳ 'ಭವ್ಯಭಾರತ ದಿವ್ಯ ಪರಂಪರೆ' ಎಂಬ ವಿಷಯ ಕುರಿತು ಪ್ರವಚನ ನೀಡುವರು.
ದಿ. 5ರಂದು ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು ಕನ್ನಡ ರಾಜ್ಯೋತ್ಸವ ಜರುಗುವುದು. ಸಾನ್ನಿಧ್ಯವನ್ನು ನಿಡಸೋಸಿ ದುರದುಂಡೀಶ್ವರಮಠದ ಜಗದ್ಗುರು ಡಾ. ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳವರು ವಹಿಸಲಿದ್ದು, ನೇತೃತ್ವವವನ್ನು ಹುಕ್ಕೇರಿ ಗುರುಶಾಂತೇಶ್ವರ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಸಮ್ಮುಖವನ್ನು ಹೊಸೂರು ಮಡಿವಾಳೇಶ್ವರಮಠದ ಗಂಗಾಧರ ಮಹಾಸ್ವಾಮಿಗಳು ವಹಿಸುವರು. ಬೆಳಗಾವಿ ಲೋಕಸಭಾ ಸದಸ್ಯರೂ ಮಾಜಿ ಮುಖ್ಯಮಂತ್ರಿಗಳೂ ಆದ ಜಗದೀಶ ಶೆಟ್ಟರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ವೀರೇಶ ಪಾಟೀಲ ಅವರು ಮಂಗಲ ನುಡಿಗಳನ್ನಾಡುವರು. ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ವಚನ ಪ್ರಾರ್ಥನೆ, ಶರಣಪ್ಪ ಶೆಟ್ಟರ ಮತ್ತು ಶಂಕರ ಬೇವಿನಗಿಡದ ಅವರಿಂದ ಪ್ರತಿನಿತ್ಯ ಸಂಗೀತ ಕಾರ್ಯಕ್ರಮ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 