ಪಹಲ್ಗಾಮ್ ಭಯೊತ್ಪಾದಕರ ದಾಳಿಗೆ 28 ಜನರ ಸಾವು: ಡಿವೈಎಎಫ್‌ಐ ಖಂಡನೆ
28 people killed in Pahalgam terrorist attack: DYAFI condemns
ಗಜೇಂದ್ರಗಡ 23: ಕಾಶ್ಮೀರದ ಪಹಲ್ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿತಾಣವಾದ ಬೈಸರನ್ ಕಣಿವೆಯಲ್ಲಿ ಮಂಗಳವಾರ ನಮ್ಮ ರಾಜ್ಯದ ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರಿನ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ( ಡಿವೈಎಎಫ್‌ಐ) ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಡಿವೈಎಎಫ್‌ಐ ಜಿಲ್ಲಾ ಮುಖಂಡ ದಾವಲಸಾಬ ತಾಳಿಕೋಟಿ
ಮಾತನಾಡಿಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿಯಾದುದು. ಅಮಾಯಕರ ಮೇಲೆ ಹೀನ ದಾಳಿಗೈದು ಅಮೂಲ್ಯ ಜೀವಗಳನ್ನು ಕೊಲೆಗೈದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಕೇಂದ್ರ ಸರಕಾರ ಖಾತ್ರಿಪಡಿಸಬೇಕು.
ಜಮ್ಮು ಕಾಶ್ಮೀರ ಜನರ ಸಮಸ್ಯೆಗಳಿಗೆ ರಾಜಕೀಯ ಪರಿಹಾರವನ್ನು ಕಂಡುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
ಹೃದಯ ವಿದ್ರಾವಕ ಘಟನೆಯಲ್ಲಿ ಮಡಿದ ಕುಟುಂಬಗಳಿಗೆ ಡಿವೈಎಎಫ್‌ಐ ಸಂತಾಪಗಳನ್ನು ಸಲ್ಲಿಸುತ್ತದೆ. ರಾಷ್ಟ್ರದ ಭದ್ರತೆ ಅತ್ಯಂತ ಪ್ರಮುಖವಾಗಿದೆ. ಕೇಂದ್ರ ಸರಕಾರ ಜಮ್ಮು ಕಾಶ್ಮೀರದಲ್ಲಿ ಸಹಜ ಸ್ಥಿತಿಯಿದೆ ಎಂದು ಹೇಳುತ್ತಲೇಯಿದೆಯಾದರೂ ವಾಸ್ತವ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳು, ವಲಸೆ ಕಾರ್ಮಿಕರು ಹಾಗೂ ಪ್ರವಾಸಿಗರ ಮೇಲೆ ದಾಳಿಗಳು ನಡೆಯುತ್ತಿವೆ. ಆದ್ದರಿಂದ ಕೇಂದ್ರ ಸರಕಾರ ಈಗಲಾದರೂ ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿ ನೆಲೆಸಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ. ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ ಪಿಡುಗಿನ ವಿರುದ್ಧ ದೇಶದ ಜನತೆ ಒಟ್ಟಾಗಿ ನಿಲ್ಲುವುದು ಅಗತ್ಯವಿದೆ. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಕೇಂದ್ರ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 