ಕಾರಂಜಿಮಠದಲ್ಲಿ 289ನೇ ಶಿವಾನುಭವ, ವಿಶೇಷ ಉಪನ್ಯಾಸ ಕಾರ್ಯಕ್ರಮ
ಬೆಳಗಾವಿ 24: ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ 289ನೇ ಶಿವಾನುಭವ ಹಾಗೂ ಮೊದಲ ಶ್ರಾವಣ ಸೋಮವಾರದ ವಿಶೇಷ ಉಪನ್ಯಾಸ ಕಾರ್ಯಕ್ರಮವು ಸೋಮವಾರ ದಿ. 28 ಜುಲೈ 2025ರಂದು ಸಾಯಂಕಾಲ 6 ಗಂಟೆಗೆ ಜರುಗುವುದು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಮಾಜಿ ವಿಧಾನ ಪರಿಷತ್ತಿನ ಸದಸ್ಯರಾದ ಮಹಾಂತೇಶ ಕವಟಗಿಮಠ ಅವರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ದೇವಾಲಯ ಸಂವರ್ಧನಾ ಸಮಿತಿ ರಾಜ್ಯ ಸಂಯೋಜಕರಾದ ಮನೋಹರ ಮಠದ ಅವರು ಅವರು "ಭಾರತೀಯ ಸಂಸ್ಕೃತಿ ಹಾಗೂ ಹಬ್ಬಗಳ ಮಹತ್ವ” ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು.
ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 