ಕೊಚ್ಚಿ, ಮಾರ್ಚ್ 9,ಇಟಲಿಯಿಂದ ದುಬೈ ವಿಮಾನದಲ್ಲಿ ಮರಳಿದ ಮೂರು ವರ್ಷದ ಮಗುವಿನಲ್ಲಿ ಕೊರೊನಾವೈರಸ್ ಧನಾತ್ಮಕ ವರದಿ ಬಂದಿದೆ. ಸೋಮವಾರ ಮಗುವನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಕೇರಳದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಆರಕ್ಕೆ ಏರಿದೆ.ದುಬೈನಿಂದ ಶನಿವಾರ ಮುಂಜಾನೆ ಪೋಷಕರೊಂದಿಗೆ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ ಮಗುವಿನಲ್ಲಿ ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಮಗುವನ್ನು ಎರ್ನಾಕುಲಂ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ರತ್ಯೇಕ ವಾರ್ಡ್ಗೆ ಸ್ಥಳಾಂತರಿಸಲಾಯಿತು.ಆಲಪ್ಪುಳದಲ್ಲಿರುವ ನಿವ್ ಪ್ರಯೋಗಾಲಯದಲ್ಲಿ ಮಗುವಿನ ಕಫದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಆಗ ಧನಾತ್ಮಕ ವರದಿ ಬಂದಿದೆ. ವಿಮಾನ ನಿಲ್ದಾಣದಲ್ಲಿ ಈ ಕುಟುಂಬದೊಂದಿಗೆ ಸಂವಹನ ನಡೆಸಿದ ವ್ಯಕ್ತಿಗಳನ್ನು ಗುರುತಿಸಲಾಗಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಆಸ್ಪತ್ರೆಯಲ್ಲಿ 12 ಜನರು ಪರೀಕ್ಷೆಗೆ ಒಳಪಟ್ಟಿದ್ದು, ಎರ್ನಾಕುಲಂ ಜಿಲ್ಲಾಧಿಕಾರಿ ಎಸ್. ಸುಹಾಸ್ ಅವರು ನಾಗರೀಕರು ಭಯಭೀತರಾಗುವ ಅಗತ್ಯವಿಲ್ಲ. ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಾಗಿದೆ ಎಂದು ಮಾಹಿತಿ ನೀಡಿದರು.