ಸಂಗಮೇಶ್ವರ ಶಿವಾಚಾರ್ಯರ 30ನೇ ಪುಣ್ಯಸ್ಮರಣೋತ್ಸವ: ಧಾರ್ಮಿಕ ಪ್ರವಚನಗಳು
30th Commemoration of Sangameshwara Shivacharya: Religious Discourses
ಕುಂದರಗಿ 30 : ಚಿರಂತನ ಮಠದ ಲಿಂ. ಸಂಗಮೇಶ್ವರ ಶಿವಾಚಾರ್ಯರ 30ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಮಠದ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆಯಿತು. ಮಂಗಳವಾರದಿಂದ ಆರಂಭವಾದ ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಹಾಗೂ ಭಕ್ತರು ಪಾಲ್ಗೊಂಡರು.
ಧರ್ಮಸಭೆಯಲ್ಲಿ ಮಾತನಾಡಿದ ರುದ್ರಮುನಿ ಶಿವಾಚಾರ್ಯರು, ಗುರುವಿನ ಸತ್ಸಂಗ ಅತ್ಯಂತ ಮಹತ್ವದ್ದು ಹಾಗೂ ಅದರ ಮೂಲಕ ಜೀವನದಲ್ಲಿ ಸನ್ಮಾರ್ಗವನ್ನು ಅನುಸರಿಸಬೇಕು ಎಂದು ಹೇಳಿದರು. ಬಿಲ್ಕೆರೂರು ಬಿಲ್ವಾಶ್ರಮ ಸಿದ್ಧಲಿಂಗ ಶಿವಾಚಾರ್ಯರು, ಮಠಕ್ಕೆ ಬರುವ ಭಕ್ತರ ಕಷ್ಟ ನಿವಾರಣೆಗೆ ಗುರುಸ್ಮರಣೆ ಶಕ್ತಿ ನೀಡುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಶ್ರೀಗಳು, ಭಕ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ಐದು ದಿನಗಳ ಕಾಲ ಪುಣ್ಯಸ್ಮರಣೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 