ಬ್ರಿಡ್ಜ್ ಕಂ ಬ್ಯಾರೇಜ್ನ 3.96 ಲಕ್ಷ ರೂ. ಮೌಲ್ಯದ 33 ಗೇಟ್ ಗಳ ಕಳ್ಳತನ
33 gates worth Rs. 3.96 lakh stolen from Bridge Co. Barrage
ರಾಣೇಬೆನ್ನೂರು 17 : ಬ್ರಿಡ್ಜ್ ಕಂ ಬ್ಯಾರೇಜ್ನ 3.96 ಲಕ್ಷ ರೂ. ಮೌಲ್ಯದ 33 ಗೇಟ್ಗಳನ್ನು ಯಾರೋ ಕಳ್ಳತನ ಮಾಡಿದ ಘಟನೆ ತಾಲೂಕಿನ ನಿಟ್ಟೂರ ಗ್ರಾಮದ ಬಳಿ ರಾತ್ರಿ ನಡೆದಿದೆ.ಗ್ರಾಮದ ಬಳಿಯಿರುವ ಬ್ಯಾರೇಜ್ಗೆ 2015ರಲ್ಲಿ 60 ಗೇಟ್ ಗಳನ್ನು ಅಳವಡಿಸಲಾಗಿತ್ತು. ಅದರಲ್ಲಿ ಮುಂಗಾರು ಬಂದಾಗ ಗೇಟ್ ತೆಗೆದು ಇಡುವುದು ಮತ್ತು ಮುಂಗಾರು ಮುಗಿದ ಮೇಲೆ ನವೆಂಬರ್ನಲ್ಲಿ ಗೇಟ್ ಅಳವಡಿಸುವ ಕಾರ್ಯ ಮಾಡಲಾಗುತ್ತಿತ್ತು.ಆದರಂತೆ ಕಳೆದ ಏಪ್ರಿಲ್ ತಿಂಗಳಲ್ಲಿ ಗೇಟ್ ತೆಗೆದು ಇಡಲಾಗಿತ್ತು. ಯಾರೋ ಕಳ್ಳರು ಅವುಗಳನ್ನು ದೋಚಿದ್ದಾರೆ ಎಂದು ಸಣ್ಣ ನೀರಾವರಿ ಇಲಾಖೆ ಸಹಾಯಕ ಇಂಜಿನಿಯರ್ ಮಣಿಕಂಠ ನಾಯ್ಕ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 