ವಿಜಯಪುರ ಮೇ.15: ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 2255 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.
ಅದರಂತೆ 902 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 1314 ಜನರು (1 ರಿಂದ 28 ದಿನಗಳ) ರಿಪರ್ೋಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು ಮೂರು ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. 36 ಜನರು ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 13 ಜನರು ಆಸ್ಪತ್ರೆಯಲ್ಲಿರುವ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 2687 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 2594 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 41 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.