ಬೀಜಿಂಗ್, ಜೂನ್ 8, ಚೀನಾದಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆ ನಾಲ್ಕು ಹೊಸ ಕೊರೊನಾ ವೈರಾಣು ಸೋಂಕು ಪ್ರಕರಣಗಳು ವರದಿಯಾಗಿದ್ದು ಯಾವುದೇ ಸಾವಿನ ಪ್ರಕರಣಗಳು ವರದಿಯಾಗಿಲ್ಲ ಎಂದು ಅಲ್ಲಿನ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.ಈ ಎಲ್ಲಾ ನಾಲ್ಕು ಪ್ರಕರಣಗಳಲ್ಲಿ ಇತರ ಪ್ರದೇಶಗಳಿಗೆ ಭೇಟಿ ನೀಡಿದ ಹಿನ್ನೆಲೆ ಇದೆ. ಈ ಪೈಕಿ ಇಬ್ಬರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ ಎಂದೂ ಸಹ ಆಯೋಗ ತಿಳಿಸಿದೆ.ಸದ್ಯ ಚೀನಾದಲ್ಲಿ 83,040 ಕೊರೊನಾ ಸೋಂಕು ಪ್ರಕರಣಗಳಿವೆ.
ಒಟ್ಟು 78,341 ಜನರು ಸೋಂಕಿನಿಂದ ಗುಣಮುಖರಾಗಿದ್ದು 4,634 ಜನರು ಸಾವನ್ನಪ್ಪಿದ್ದಾರೆ. ಹಾಂಕಾಂಗ್ ನಲ್ಲಿ 1,106 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ನಾಲ್ವರು ಮೃತಪಟ್ಟಿದ್ದಾರೆ. 1049 ಜನರು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದಾರೆ. ಮಕಾವೋದಲ್ಲಿ 45 ಜನರಿಗೆ ಸೋಂಕು ತಗುಲಿದ್ದು ಎಲ್ಲರೂ ಚೇತರಿಸಿಕೊಂಡು ಮನೆಗೆ ಹಿಂದಿರುಗಿದ್ದಾರೆ. ತೈವಾನಲ್ಲಿ 443 ಜನರಲ್ಲಿ ಸೋಂಕು ದೃಢಪಟ್ಟಿದ್ದು ಏಳು ಜನರು ಮೃತಪಟ್ಟಿದ್ದು ಇತರ 430 ಜನರು ಗುಣಮುಖರಾಗಿದ್ದಾರೆ.