400 ಕೋಟಿ ಲೂಟಿ ಪ್ರಕರಣ: ಆರೋಪವೇ ನಕಲಿ ಎಂದ ಪೊಲೀಸರು
400 crore loot case: Police say the allegations are fake
ನಾಸಿಕ್ 16: ‘ನಗದು ಸಾಗಿಸುತ್ತಿದ್ದ ಟ್ರಕ್ ತಡೆದು 400 ಕೋಟಿ ದೋಚಿ ಪರಾರಿಯಾಗಿದ್ದಾರೆ ಎಂದು ಚಾಲಕನೊಬ್ಬ ಸಲ್ಲಿಸಿದ್ದ ದೂರು ಸುಳ್ಳು, ಅಂತಹ ಯಾವುದೇ ಪ್ರಕರಣ ನಡೆದಿಲ್ಲ’ ಎಂದು ಮಹಾರಾಷ್ಟ್ರದ ನಾಸಿಕ್ ಗ್ರಾಮೀಣ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಚಲಿಸುತ್ತಿದ್ದ ಟ್ರಕ್ ಅನ್ನು ಅಡ್ಡಹಾಕಿದ 7 ಮಂದಿ ಅನಾಮಿಕರು, ನನ್ನ ಮೇಲೆ ಹಲ್ಲೆ ಮಾಡಿ ಟ್ರಕ್‌ನಲ್ಲಿದ್ದ 400 ಕೋಟಿ ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಟ್ರಕ್ ಚಾಲಕ ಸಂದೀಪ್ ಪಾಟೀಲ್ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಎಲ್ಲಾ 7 ಆರೋಪಿಗಳನ್ನು ಇಗತ್ಪುರಿ ನ್ಯಾಯಾಲಯ ಬಿಡುಗಡೆ ಮಾಡಿದೆ ಮತ್ತು ನಕಲಿ ದೂರು ನೀಡಿದ್ದಕ್ಕಾಗಿ ಟ್ರಕ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2025ರ ಅಕ್ಟೋಬರ್ 22ರಂದು 7 ಜನರು ತಮ್ಮನ್ನು ದಾರಿ ತಪ್ಪಿಸಿ, ಅಪಹರಿಸಿ, ಹಲ್ಲೆ ನಡೆಸಿದ್ದಾರೆ. ಬಳಿಕ ಟ್ರಕ್‌ನಲ್ಲಿದ್ದ 400 ಕೋಟಿ ಮೌಲ್ಯದ ರದ್ದಾದ ?2000 ಮುಖಬೆಲೆಯ ನೋಟುಗಳನ್ನು ಲೂಟಿ ಮಾಡಿದ್ದಾರೆ ಎಂದು ಚಾಲಕ ಸಂದೀಪ್ ಪಾಟೀಲ್ ಘೋಟಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಹಂಚಿಕೊಂಡಿದ್ದ ಪಾಟೀಲ್, ‘ಟ್ರಕ್‌ನಲ್ಲಿ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹವಾಲಾ ಹಣ ಸಾಗಿಸಲಾಗುತ್ತಿತ್ತು’ ಎಂದು ಹೇಳಿಕೊಂಡಿದ್ದರು. ‘ಪಾಟೀಲ್ ಅವರು ಆರೋಪಿಸಿದ್ದ 7 ಜನರನ್ನು ನಾವು ಬಂಧಿಸಿದ್ದೇವೆ. ಆದರೆ, ತನಿಖೆಯಲ್ಲಿ ಪಾಟೀಲ್ ಅವರು ಹೇಳಿದಂತೆ ಆರೋಪಿಗಳ ಸಂಚಾರದ ಮಾರ್ಗ, ಕರೆ ದಾಖಲೆಗಳು, ಸಮಯ ಇತ್ಯಾದಿಗಳು ಹೋಲಿಕೆಯಾಗಿಲ್ಲ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 