ದಿ. 31ರಂದು ದಿ. ಇಂದಿರಾ ಗಾಂಧಿ ಅವರ 41ನೇ ಪುಣ್ಯಸ್ಮರಣೆ
41st death anniversary of Indira Gandhi
ಗದಗ 29: ಹದಿನೈದು ವರ್ಷ ಪ್ರಧಾನಿಯಾಗಿ, ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ದಿ. ಇಂದಿರಾ ಗಾಂಧಿ ಅವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮ ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 31ರಂದು ಬೆಳಿಗ್ಗೆ 10.20ಕ್ಕೆ ಜರುಗಲಿದೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ ಭಾಗವಹಿಸುವರು. ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅದ್ಯಕ್ಷರಾದ ಬಿ.ಬಿ. ಅಸೂಟಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಕೃಷ್ಣಗೌಡ ಎಚ್. ಪಾಟೀಲ ಪಾಲ್ಗೊಳ್ಳುವರು.
ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರುಗಳು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ, ಪಿ.ಎಲ್.ಡಿ ಬ್ಯಾಂಕ್ ನ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಕಾಂಗ್ರೆಸ್ ಪ್ರಚಾರ ಸಮಿತಿ, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ ಅವರು ವಿನಂತಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 