ಹಾರೂಗೇರಿ ಯಲ್ಲಿ 43ನೇ ವೇದಾಂತ ಪರಿಷತ್
43rd Vedanta Parishat in Harugeri
ಹಾರೂಗೇರಿ 17: ; ಶ್ರೀ ಚೆನ್ನವೃಷಭೇಂದ್ರ ಲೀಲಾಮಠದಲ್ಲಿ ಅಕ್ಟೋಬರ್ 22ರಿಂದ 26ರವರೆಗೆ ನಡೆಯಲಿರುವ 43ನೇ ವೇದಾಂತ ಪರಿಷತ್ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಇಂಚಲ-ಹರಗೂಗೇರಿ ಮಠದ ಶ್ರೀ ಡಾ. ಶಿವಾನಂದ ಭಾರತಿ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಮಹಾತ್ಮರ ನುಡಿಗಳು ಭಕ್ತರ ಬದುಕಿಗೆ ಉತ್ತಮ ಸಂಸ್ಕಾರ, ಮೌಲ್ಯಗಳು ಹಾಗೂ ನೆಮ್ಮದಿಯನ್ನು ನೀಡುತ್ತವೆ. ಆತ್ಮಸಾಕ್ಷಾತ್ಕಾರ ಮತ್ತು ಪರಮಾತ್ಮನ ಕೃಪೆಗೆ ಪಾತ್ರರಾಗಲು ಪ್ರತಿಯೊಬ್ಬರೂ ತನು, ಮನ, ಧನದಿಂದ ಧಾರ್ಮಿಕ ಕಾರ್ಯಗಳಿಗೆ ಸಹಕರಿಸಬೇಕು ಎಂದು ಹೇಳಿದರು.
ಮಠದ ಕಾರ್ಯದರ್ಶಿ ಅಪ್ಪಾಸಾಬ ಕುಲಕರ್ಣಿ ಮಾತನಾಡಿ, ಶ್ರೀ ಡಾ. ಶಿವಾನಂದ ಭಾರತಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿರುವ ವೇದಾಂತ ಪರಿಷತ್‌ಗೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಅನೇಕ ಮಹಾತ್ಮರು ಆಗಮಿಸಿ ಆಶೀರ್ವಚನ ನೀಡಲಿದ್ದಾರೆ ಎಂದರು.
ಈ ವೇಳೆ ಇಂಚಲಶ್ರೀ ಡಾ. ಶಿವಾನಂದ ಭಾರತಿ ಮಹಾಸ್ವಾಮಿಗಳು ಹರಗೂಗೇರಿಗೆ ಪಾದಸ್ಪರ್ಶ ಮಾಡಿ 50ನೇ ವರ್ಷದ ಸುವರ್ಣ ಮಹೋತ್ಸವ ಆಚರಣೆ ನಡೆಯುತ್ತಿರುವುದಾಗಿ ತಿಳಿಸಿದರು. ಮಠದ ಭಕ್ತರಾದ ಶಿವಗೊಂಡ ಧರ್ಮಟ್ಟಿ, ವಿಠ್ಠಲರಾವ್ ಬಂತಿ, ಬಾಬು ಪರಮಗೌಡರ, ಲಾಲಾಸಾಬ ಜಮಾದಾರ, ಬಾಬು ಹಳಗೂರ, ನೇಮಣ್ಣ ಕೊತ್ತಲಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 