ವ್ಯಾಂಕೋವರ್ ನಿಂದ 45 ಭಾರತೀಯರು ಬೆಂಗಳೂರಿಗೆ ಆಗಮನ
ಬೆಂಗಳೂರು, ಮೇ 26,ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಕೆನಡಾದ ವ್ಯಾಂಕೋವರ್ ನಿಂದ ಇಂದು ಬೆಳಗ್ಗೆ 8.30 ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹದಿನೆಂಟನೇ ಏರ್ ಇಂಡಿಯಾ ವಿಮಾನದಲ್ಲಿ 45 ಮಂದಿ ಪುರುಷರ ಪ್ರಯಾಣಿಕರು ಆಗಮಿಸಿದ್ದಾರೆ. ನಂತರ ಏರ್ ಇಂಡಿಯಾ ವಿಮಾನವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿತು. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 45 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. 45 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 