ರಾಜ್ಯದ್ಯಾಂತ ನಿರುದ್ಯೋಗಿಗಳಿಗೆ 450 ಟೂರಿಸ್ಟ್ ಟ್ಯಾಕ್ಸಿ ವಿತರಣೆ: ಯಡಿಯೂರಪ್ಪ

ಬೆಂಗಳೂರು, ಫೆ 1 :      ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ಯುವ ಸಮೂಹ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ. 

ವಿಧಾನಸೌಧ ಮುಂಭಾಗ ನೂರಕ್ಕೂ ಹೆಚ್ಚು  ನಿರುದ್ಯೋಗಿ ಯುವಕ ಯುವತಿಯರಿಗೆ ಟೂರಿಸ್ಟ್ ಟ್ಯಾಕ್ಸಿಗಳನ್ನು ವಿತರಿಸಿ ಮಾತನಾಡಿದ ಅವರು, ಪ್ರವಾಸಿ ಟ್ಯಾಕ್ಸಿ ಯೋಜನೆ ನಿರುದ್ಯೋಗ ಸಮಸ್ಯೆ ನಿವಾರಣೆಮಾಡಲು ಸಹಕಾರಿಯಾಗಿದೆ. ನಿರುದ್ಯೋಗ ಸಮಸ್ಯೆ ಇರುವ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ರಾಜ್ಯಾದ್ಯಂತ 450 ಟ್ಯಾಕ್ಸಿವಿತರಣೆ ಮಾಡಲಾಗುವುದು ಎಂದರು. 

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಸಿ.ಸಿ.ಪಾಟೀಲ್, ಚಲನಚಿತ್ರ ನಟಿ ಶ್ರುತಿ ಉಪಸ್ಥಿತರಿದ್ದರು.