ಜಿಲ್ಲೆಯಲ್ಲಿ 456 ಪ್ರಕರಣಗಳು ರಾಜೀ ಮೂಲಕ ಇತ್ಯರ್ಥ: ನ್ಯಾ.ಲಾಡಖಾನ್
ಲೋಕದರ್ಶನ ವರದಿ
ಹಾವೇರಿ12: ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಜಿಲ್ಲೆಯ 456 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿಗಳಾದ ವೈ.ಎಲ್.ಲಾಡಖಾನ್ ಅವರು ತಿಳಿಸಿದ್ದಾರೆ.
ಜಿಲ್ಲೆಯ ನ್ಯಾಯಾಲಯಗಳಲ್ಲಿ ಎರಡನೆಯ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ ಕಕ್ಷಿಗಾರರು ಭಾಗವಹಿಸಿದ್ದರು.
ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಕಾಮರ್ಿಕರ ವೇತನ, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜೀಯಾಗಬಲ್ಲ ಅಪರಾಧ ಪ್ರಕರಣಗಳು, ವೈವಾಹಿಕ ಕುಟುಂಬ ನ್ಯಾಯಾಲಯ ಹಾಗೂ ಇತರ ಸಿವಿಲ್ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪರಿಹಾರ, ಕಾಮರ್ಿಕ ವಿವಾದ, ಭೂಸ್ವಾಧೀನ, ಕಂದಾಯ ಪ್ರಕರಣಗಳು, ಸಿವಿಲ್ ಪ್ರಕರಣಗಳು ಸೇರಿದಂತೆ 2234 ವಿವಿಧ ಪ್ರಕರಣಗಳ ವಿಚಾರಣೆ ನಡೆಸಲಾಯಿತು ಹಾಗೂ 456 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಯಿತು ಮತ್ತು ರೂ.21,79,66,759-00 ಗಳ ಪರಿಹಾರಧನ ವಿತರಣೆ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 