ಜಿಲ್ಲೆಯಲ್ಲಿ ಈವರೆಗೆ 47 ಕೊರೊನಾ ಸೋಂಕಿತರು ದೃಢ: 19 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

ವಿಜಯಪುರ ಮೇ.04: ಜಿಲ್ಲೆಯಲ್ಲಿ ಈವರೆಗೆ 47 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ ಒಟ್ಟು 19 ಜನ ಕೋವಿಡ್-19 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಇಂದು ಏ. 5ರಂದು ಒಬ್ಬರಿಗೆ ಕೋವಿಡ್ ಸೋಂಕು ತಗಲಿದ್ದು ರೋಗಿ ಸಂಖ್ಯೆ ಪಿ - 640 ಇವರು ರೋಗಿ ಸಂಖ್ಯೆ ಪಿ-228 ಇವರೊಂದಿಗೆ ದ್ವಿತೀಯ ಸಂಪರ್ಕದಿಂದ ಸೋಂಕು ತಗುಲಿದ್ದು, ಕಂಟೇನ್ಮೆಂಟ್ ವಲಯ ವ್ಯಾಪ್ತಿಯಿಂದ ಸೋಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ. 

         ಶ್ವಾಸಕೋಶ ತೊಂದರೆ ಮತ್ತು ಇತರೆ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಈ ರೋಗಿ ಬಳಲುತ್ತಿದ್ದು ರಾಜ್ಯ ವೈದ್ಯಕೀಯ ಮತ್ತು ಜಿಲ್ಲಾ ತಾಂತ್ರಿಕ ವೈದ್ಯಕೀಯ ತಜ್ಞರು ಸಮನ್ವಯತೆಯಿಂದ ಚಿಕಿತ್ಸೆ ನೀಡುತ್ತಿದ್ದು, ಈಗ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 2015 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. 224 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 1574 ಜನರು ರಿಪರ್ೋಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು ಇಬ್ಬರು ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. 19 ಜನರು ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 17 ಜನರು ಆಸ್ಪತ್ರೆ ಐಸೋಲೇಶನ್ದಲ್ಲಿ ನಿಗಾ ಇಡಲಾಗಿದೆ. ಈವರೆಗೆ 2176 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 1995 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 134 ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿ.ಪಂ ಸಿಇಒ ಗೋವಿಂದ ರೆಡ್ಡಿ ಉಪಸ್ಥಿತರಿದ್ದರು.