ಅಭಿವೃದ್ಧಿ ಕಾಮಗಾರಿಗೆ 48.65 ಕೋಟಿ ರೂ.ಗಳ ಅನುದಾನ ಬಿಡುಗಡೆ
ಲೋಕದರ್ಶನ ವರದಿ
ಗೋಕಾಕ 24: ಅರಭಾವಿ ಮತಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 48.65 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಗುರುವಾರದಂದು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಲೋಕೋಪಯೋಗಿ ಇಲಾಖೆಯ ರಸ್ತೆಗಳ ಅಭಿವೃದ್ಧಿಗಾಗಿ 25 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಿಂದ ರಸ್ತೆಗಳ ಸುಧಾರಣೆಗಾಗಿ 3 ಕೋಟಿ ರೂ., ಜಲಸಂಪನ್ಮೂಲ ಇಲಾಖೆಯಿಂದ ರಸ್ತೆಗಳ ಅಭಿವೃದ್ಧಿಗಾಗಿ 9.75 ಕೋಟಿ ರೂ. ಬಿಡುಗಡೆಯಾಗಿದೆ. ನಗರಾಭಿವೃದ್ಧಿ ಇಲಾಖೆಯ ಎಸ್ಎಫ್ಸಿ ಯೋಜನೆಯಡಿ ಮೂಡಲಗಿ ಪುರಸಭೆ ಹಾಗೂ ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಗಳ ವ್ಯಾಪ್ತಿಯ ರಸ್ತೆಗಳ ಸುಧಾರಣೆಗೆ 5 ಕೋಟಿ ರೂ.ಗಳ ಅನುದಾನ ಸಕರ್ಾರದಿಂದ ಬಿಡುಗಡೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಣ್ಣ ನೀರಾವರಿ ಇಲಾಖೆಯಿಂದ 13 ಬ್ಯಾರೇಜ್ಗಳ ಸುಧಾರಣೆ, 4 ಏತ ನೀರಾವರಿ ಕಾಮಗಾರಿಗಳ ಸುಧಾರಣೆ ಹಾಗೂ 3 ಕೆರೆಗಳ ಸುಧಾರಣೆಗಾಗಿ 4.90 ಕೋಟಿ ರೂ. ಅನುದಾನ ಸೇರಿದಂತೆ ಒಟ್ಟಾರೆ 48.65 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.
ಧರ್ಮಟ್ಟಿ ಸೇತುವೆಗೆ ಒಂದು ಕೋಟಿ ರೂ: ಧರ್ಮಟ್ಟಿ-ಮೂಡಲಗಿ ರಸ್ತೆಯ ಧರ್ಮಟ್ಟಿ ಹಳ್ಳಕ್ಕೆ ಸೇತುವೆ ನಿರ್ಮಾಣಕ್ಕಾಗಿ ಜಲಸಂಪನ್ಮೂಲ ಇಲಾಖೆಯಿಂದ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಾಗುವುದು ಎಂದು ಅವರು ಹೇಳಿದ್ದಾರೆ.
ಶಾಲಾ ಕಟ್ಟಡಗಳ ದುರಸ್ತಿಗಾಗಿ 10.17 ಕೋಟಿ ರೂ. ಪ್ರಸ್ತಾವನೆ: ಪ್ರವಾಹದಿಂದ ಹಾನಿಗೊಳಗಾದ ಮೂಡಲಗಿ ಶೈಕ್ಷಣಿಕ ವಲಯದ ಶಾಲಾ ಕೊಠಡಿಗಳ ದುರಸ್ತಿಗಾಗಿ 5.28 ಕೋಟಿ ರೂ. ಹಾಗೂ ಗೋಕಾಕ ಶೈಕ್ಷಣಿಕ ವಲಯದ ಶಾಲಾ ಕೊಠಡಿಗಳ ದುರಸ್ತಿಗಾಗಿ 4.89 ಕೋಟಿ ರೂ.ಗಳ ಅನುದಾನಕ್ಕಾಗಿ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಿಂದೆಂದೂ ಕಂಡರಿಯದ ನೆರೆ ಪ್ರವಾಹದಿಂದಾಗಿ ಮೂಡಲಗಿ ವಲಯದ 194 ಶಾಲೆಗಳ 459 ಕೊಠಡಿಗಳು ಹಾನಿಗೊಳಗಾಗಿವೆ. ಜೊತೆಗೆ ಗೋಕಾಕ ವಲಯದ 103 ಶಾಲೆಗಳ 417 ಶಾಲಾ ಕೊಠಡಿಗಳು ಕೂಡ ಹಾನಿಯಾಗಿವೆ. ಇವುಗಳ ದುರಸ್ತಿಗಾಗಿ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇಷ್ಟರಲ್ಲಿಯೇ ಅನುದಾನ ಬಿಡುಗಡೆಯಾಗಲಿದೆ ಎಂದು ಹೇಳಿದರು.
ಇನ್ನೂ 4 ಬ್ಯಾರೇಜ್ಗಳ ಸುಧಾರಣೆಗೆ 2 ಕೋಟಿ ರೂ.ಗಳ ಅನುದಾನಕ್ಕಾಗಿ ಸಣ್ಣ ನೀರಾವರಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಮಾಹಿತಿ ನೀಡಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 