ಕೊಪ್ಪಳದಲ್ಲಿ ಸೆ.13ರಂದು ಪದವಿಪೂರ್ವ ಕಾಲೇಜುಗಳ 4ನೇ ಶೈಕ್ಷಣಿಕ ಸಮ್ಮೇಳನ
4th Academic Conference of Pre-University Colleges in Koppal on September 13
ಕೊಪ್ಪಳ, ಸೆ.11: ಕೊಪ್ಪಳ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ನೌಕರರ ಜಿಲ್ಲಾ ಮಟ್ಟದ 4ನೇ ಶೈಕ್ಷಣಿಕ ಸಮ್ಮೇಳನ-2026 ಸೆ.13ರಂದು ಕುಷ್ಟಗಿ ಪಟ್ಟಣದ ಕೊಪ್ಪಳ ರಸ್ತೆಯಲ್ಲಿರುವ ಎನ್ಸಿಎಲ್ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಸಂಘದ ಕೋಶಾಧ್ಯಕ್ಷ ಟಿ.ಸಿ. ಶಾಂತಪ್ಪ ತಿಳಿಸಿದ್ದಾರೆ.
ಈ ಕುರಿತು ಶುಕ್ರವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಗ್ಗೆ 9 ಗಂಟೆಗೆ ಸಮ್ಮೇಳನ ಆರಂಭವಾಗಲಿದ್ದು, ಕೊಪ್ಪಳ ಜಿಲ್ಲಾ ಪ್ರಾಚಾರ್ಯರ ಸಂಘ, ಉಪನ್ಯಾಸಕರ ಸಂಘ ಹಾಗೂ ಕುಷ್ಟಗಿ ತಾಲ್ಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ನೌಕರರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಮ್ಮೇಳನದ ದಿವ್ಯ ಸಾನ್ನಿಧ್ಯವನ್ನು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಕುಷ್ಟಗಿ ಪಟ್ಟಣದ ಸಮಾಜ ಸೇವಕ ರವಿಕುಮಾರ ಸ್ವಾಮಿ ಮದ್ಧಾನಿ ಹಿರೇಮಠ ಅವರ ಗೌರವ ಉಪಸ್ಥಿತಿಯಲ್ಲಿ ಕುಷ್ಟಗಿ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಎಚ್. ಪಾಟೀಲ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಕೊಪ್ಪಳ ಜಿಲ್ಲಾ ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷ ಬಸಪ್ಪ ನಾಗೋಲಿ ಅಧ್ಯಕ್ಷತೆ ವಹಿಸಲಿದ್ದು, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಗೌಡ ಆಶಯ ನುಡಿಗಳನ್ನಾಡಲಿದ್ದಾರೆ. ರಾಜ್ಯ ಕಾರ್ಯದರ್ಶಿ ಭೀಮಪ್ಪ ಎಚ್. ಗೊಲ್ಲರ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಸಂಘದ ಕುಷ್ಟಗಿ ತಾಲ್ಲೂಕು ಅಧ್ಯಕ್ಷ ಹನುಮಪ್ಪ ಚೌಧರಿ ಸ್ವಾಗತ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷ ಡಾ. ರಾಜಕ್ ಉಸ್ತಾದ್ ಹಾಗೂ ಹನುಮಂತರಾಯ ಕುರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಸಮ್ಮೇಳನದಲ್ಲಿ ಕೊಪ್ಪಳ ಸಂಸದ ಕೆ. ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ, ಶಶಿಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ, ಹೇಮಲತಾ ನಾಯಕ, ಶರಣಪ್ಪ ಮಟ್ಟೂರು, ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಶಿಕ್ಷಣ ಪ್ರೇಮಿ ಸಿ.ವಿ. ಚಂದ್ರಶೇಖರ, ಖ್ಯಾತ ವೈದ್ಯ ಬಸವರಾಜ ಕ್ಯಾಟರ್, ಪುರಸಭೆ ಮಾಜಿ ಅಧ್ಯಕ್ಷ ಕಲ್ಲೇಶ್ ತಾಳದ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.
ಜಿಲ್ಲೆಯ ಎಲ್ಲ ಪದವಿಪೂರ್ವ ಕಾಲೇಜುಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಟಿ.ಸಿ. ಶಾಂತಪ್ಪ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಬಸಪ್ಪ ನಾಗೋಲಿ, ಶಿವಾನಂದ ಮೇಟಿ, ಎಚ್. ಮಲ್ಲಿಕಾರ್ಜುನ, ಸೋಮಶೇಖರ ಗೌಡ, ಭೀಮಪ್ಪ ಎಚ್. ಗೊಲ್ಲರ್, ಡಾ. ಸಿದ್ದಲಿಂಗಪ್ಪ ಕೊಟ್ನೆಕಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 