ಬೊಲಿವಿಯಾದಲ್ಲಿ 5.3 ತೀವ್ರತೆಯ ಭೂಕಂಪ

ನ್ಯೂಯಾರ್ಕ್, ಜ 27, ಬೊಲಿವಿಯಾದ ಪಶ್ಚಿಮ ವಿಲಾಜನ್ ನಲ್ಲಿ ಭಾನುವಾರ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂಗರ್ಭ ಸರ್ವೇಕ್ಷಣಾಲಯ ತಿಳಿಸಿದೆ. ಈ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.3 ರಷ್ಟು ದಾಖಲಾಗಿತ್ತು ಎಂದು ಇಲಾಖೆ ತಿಳಿಸಿದೆ. 22.039 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 65.919 ಡಿಗ್ರಿ ಪಶ್ಚಿಮ ರೇಖಾಂಶದಲ್ಲಿ 277.63 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು ಎಂದು ವರದಿಯಾಗಿದೆ.