ಅನಂತ್ನಾಗ್ನಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ಸಾವು

 ಶ್ರೀನಗರ, ನ 6:   ದಕ್ಷಿಣ ಕಾಶ್ಮೀರ ಜಿಲ್ಲೆ ಅನಂತ್ನಾಗ್ನ ಶ್ರೀನಗರ- ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.    ಅನಂತ್ನಾಗ್ನ ವಾನ್ಪೋದಲ್ಲಿ ಟ್ರಕ್ವೊಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ  ಗಾಯಗೊಂಡಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.  'ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಎಲ್ಲರೂ ಮೃತಪಟ್ಟಿದ್ದಾರೆಂದು ವೈದ್ಯರು ಪ್ರಕಟಿಸಿದ್ದಾರೆ.' ಎಂದು ಅವರು  ತಿಳಿಸಿದ್ದಾರೆ.   ಪೊಲೀಸರು ಪ್ರಕರಣ ದಾಖಲಿಸಿ ಅಪಘಾತದ ಬಗ್ಗೆ ತನಿಖೆ ಆರಂಭಿಸಿದ್ದಾರೆ.