ಪತ್ರಿಕೋದ್ಯಮ, ರಂಗಭೂಮಿ, ಸಾಂಸ್ಕೃತಿಕ ಸಾಧನೆಗೆ 50: ರಮೇಶ ಸುರ್ವೆಗೆ ಸುವರ್ಣ ಮಹೋತ್ಸವ
50 Years of Achievements in Journalism, Theatre, and Culture: Golden Jubilee for Ramesh Surve
ಕೊಪ್ಪಳ, ಆ.14: ಪತ್ರಿಕೋದ್ಯಮ, ರಂಗಭೂಮಿ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಐದು ದಶಕಗಳ ಸಾಧನೆ ಮಾಡಿರುವ ರಮೇಶ ಸುರ್ವೆಯವರ ಸುವರ್ಣ ಮಹೋತ್ಸವ ಅಭಿನಂದನಾ ಸಮಾರಂಭ ಆ.16ರಂದು ಕೊಪ್ಪಳದಲ್ಲಿ ನಡೆಯಲಿದೆ.
ವಿಶ್ವಬಂಧು ಬಸವಣ್ಣ ಶಿಕ್ಷಣ ಮತ್ತು ಸಾಂಸ್ಕೃತಿಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಳಿಗ್ಗೆ 10ರಿಂದ ಮಧ್ಯಾಹ್ನ 2.30ರವರೆಗೆ ಸರ್ಕಾರಿ ನೌಕರರ ಭವನದಲ್ಲಿ ವಿಚಾರ ಸಂಕಿರಣ, ಅಭಿನಂದನಾ ಸಮಾರಂಭ ಹಾಗೂ ಟ್ರಸ್ಟ್ ಉದ್ಘಾಟನೆ ಆಯೋಜಿಸಲಾಗಿದೆ.
ರಮೇಶ ಸುರ್ವೆ ಅವರು ರಂಗಭೂಮಿ, ಪತ್ರಿಕೋದ್ಯಮ, ಸಾಹಿತ್ಯ, ಸಿನಿಮಾ ಹಾಗೂ ಸಾಂಸ್ಕೃತಿಕ ಸಂಘಟನೆಯಲ್ಲಿ ಐದು ದಶಕಗಳಿಂದ ಸೇವೆ ಸಲ್ಲಿಸಿದ್ದಾರೆ. ವಿಶ್ವೇಶ್ವರಯ್ಯ ಪ್ರತಿಷ್ಠಾನ ಹಾಗೂ ಸುರ್ವೆ ಕಲ್ಚರಲ್ ಅಕಾಡೆಮಿ ಮೂಲಕ ಅನೇಕ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಿದ್ದಾರೆ. 500ಕ್ಕೂ ಹೆಚ್ಚು ಸಾಹಿತ್ಯ ಕೃತಿಗಳಿಗೆ ವಿಶ್ವೇಶ್ವರಯ್ಯ ಪ್ರಶಸ್ತಿ ನೀಡಿರುವ ಅವರು, 12 ಮಕ್ಕಳ ಸಾಹಿತ್ಯ ಸಮ್ಮೇಳನ, 12 ಕವಿ ಸಮ್ಮೇಳನ, 12 ರಾಷ್ಟ್ರೀಯ ನಾಟ್ಯ ಮೇಳ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಸಂಘಟಿಸಿದ್ದಾರೆ.
‘ಮಂದಾಕಿನಿ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಸಾಹಿತ್ಯ ರಚಿಸಿ ನಿರ್ದೇಶನ ಮಾಡಿರುವ ಅವರು, ಪ್ರಸ್ತುತ ‘ವಿಕ್ರಮ್ ಐಎಎಸ್’ ಚಿತ್ರದ ನಿರ್ಮಾಣ, ಚಿತ್ರಕಥೆ, ಸಂಭಾಷಣೆ ಮತ್ತು ಗೀತೆಗಳ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ಗಣ್ಯರ ಉಪಸ್ಥಿತಿ: ಶ್ರೀ ಮ.ನಿ.ಪ್ರ. ಶಿವಶಾಂತವೀರ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಮಾಜಿ ತೋಟಗಾರಿಕೆ ಸಚಿವ ಶಶಿಕಾಂತ ಅಕ್ಕಪ್ಪನಾಯಕ ಉದ್ಘಾಟಿಸಲಿದ್ದಾರೆ. ಡಾ. ಮಹಾಂತೇಶ ಮಲ್ಲನಗೌಡರ್ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಕುಲಪತಿ ಡಾ. ಮಲ್ಲಿಕಾ ಎಸ್. ಘಂಟಿ ರಮೇಶ ಸುರ್ವೆಯವರನ್ನು ಅಭಿನಂದಿಸಲಿದ್ದಾರೆ.
ಡಾ. ವಿಠಲರಾವ್ ಟಿ. ಗಾಯಕ್ವಾಡ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ಪತ್ರಿಕೋದ್ಯಮ, ಸಾಂಸ್ಕೃತಿಕ ಕ್ಷೇತ್ರ ಮತ್ತು ರಂಗಭೂಮಿ ಕುರಿತು ಕ್ರಮವಾಗಿ ಸಾವಿತ್ರಿ ಮುಜಮದಾರ, ಡಾ. ರಾಜೇಂದ್ರ ಎಸ್. ಗಡಾದ ಹಾಗೂ ಡಾ. ಜೀವನ್ಸಾಬ್ ವಾಲಿಕಾರ ವಿಚಾರ ಮಂಡಿಸಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಡಾ. ಮಹಾಂತೇಶ ಬ. ನೆಲಾಗಣಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 