ಜಿಲ್ಲೆಯಲ್ಲಿ ಈವರೆಗೆ 50 ಕೊರೊನಾ ಸೋಂಕಿತರು ದೃಢ

ವಿಜಯಪುರ ಮೇ.11: ಜಿಲ್ಲೆಯಲ್ಲಿ ಈವರೆಗೆ 50 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ ಒಟ್ಟು 33 ಜನ ಕೋವಿಡ್-19 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

       ಒಬ್ಬರಿಗೆ ಕೋವಿಡ್ ಸೋಂಕು ತಗಲಿದ್ದು ರೋಗಿ ಸಂಖ್ಯೆ - 856 (20 ವರ್ಷದ ಮಹಿಳೆ) ಇವರು ರೋಗಿ ಸಂಖ್ಯೆ - 511 ಇವರ ಸಂಪರ್ಕದಿಂದ ಸೋಂಕು ತಗುಲಿದ್ದು, ಕಂಟೇನ್ಮೆಂಟ್ ವಲಯ ವ್ಯಾಪ್ತಿಯಿಂದ ಸೋಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ. ನಗರದ ನಿಗದಿತ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 2153 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. 637 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 1480 ಜನರು ರಿಪರ್ೋಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು ಮೂರು ಜನ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. 33 ಜನರು ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 14 ಜನರು ಆಸ್ಪತ್ರೆಯಲ್ಲಿರುವ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ 2539 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 2405 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 84 ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಹೇಳಿದರು.

ವಿವಿಧ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸಲು ಇಂದು ದಿನಾಂಕ 11-05-2020 ರವರೆಗೆ ಆನ್ಲೈನ್ ಮೂಲಕ 4140 ಜನರು ನೋಂದಣಿ ಅಜರ್ಿ ಸಲ್ಲಿಸಿದ್ದಾರೆ. ನೋಂದಣಿ ಮಾಡಿಸಿಕೊಂಡ 3268 ಜನ ಕಾಮರ್ಿಕರು, ಪ್ರವಾಸಿಗರು, ವಿದ್ಯಾಥರ್ಿಗಳಿಗೆ ಅನುಮತಿ ನೀಡಲಾಗಿದೆ. ಇನ್ನೂ ಒಟ್ಟು 872 ಜನರ ಅನುಮತಿಯನ್ನು ಕಾಯ್ದಿರಿಸಲಾಗಿದೆ. ವಿಜಯಪುರ ಜಿಲ್ಲೆಯಿಂದ ವಿವಿಧ ರಾಜ್ಯಗಳಿಗೆ ತೆರಳಲು ಒಟ್ಟು 5737 ಕಾಮರ್ಿಕರು, ಪ್ರವಾಸಿಗರು, ವಿದ್ಯಾಥರ್ಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಹೋಮ್ಕ್ವಾರಂಟೈನ್ಗಳಲ್ಲಿ ಲೋಪದೋಷಗಳಾಗದಂತೆ ನಿರ್ವಹಿಸಿ

ಪ್ರವಾಸಿಗರು, ವಿದ್ಯಾಥರ್ಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.