ನವದೆಹಲಿ, ಅ.15: ಆಯುಷ್ಮಾನ್ ಭಾರತ್ ಯೋಜನೆಯಡಿ 50 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನ ನೀಡುವ ಮೂಲಕ ಭಾರತ ಪ್ರಮುಖ ಮೈಲಿಗಲ್ಲು ಸಾಧಿಸಿದೆ. ಸರ್ಕಾರ ಆರೋಗ್ಯ ಕ್ಷೇತ್ರದಲ್ಲಿ ಕೈಗೊಂಡ ಈ ಪ್ರಯತ್ನಗಳನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಶ್ಲಾಘಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, "ಆರೋಗ್ಯಕರ ಭಾರತವನ್ನು ಕಟ್ಟುವ ಪ್ರಯಾಣದಲ್ಲಿ ಒಂದು ಪ್ರಮುಖ ಮೈಲಿಗಲ್ಲು! ಒಂದು ವರ್ಷದಲ್ಲಿ 50 ಲಕ್ಷಕ್ಕೂ ಹೆಚ್ಚು ನಾಗರಿಕರು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಲಾಭವನ್ನು ಪಡೆದಿರುವುದು ಪ್ರತಿಯೊಬ್ಬ ಭಾರತೀಯರಿಗೂ ಹೆಮ್ಮೆ ತರುತ್ತದೆ ಎಂದು ತಿಳಿಸಿದ್ದಾರೆ. ಗುಣಪಡಿಸುವುದರ ಹೊರತಾಗಿ, ಈ ಯೋಜನೆಯು ಹಲವಾರು ಭಾರತೀಯರನ್ನು ಸಬಲೀಕರಣಗೊಳಿಸುತ್ತಿದೆ ಎಂದು ಅವರು ಹೇಳಿದರು. ನಿಖರವಾಗಿ ಒಂದು ವರ್ಷದ ಹಿಂದೆ 2018 ರಲ್ಲಿ ಪ್ರಾರಂಭವಾದ ಆಯುಷ್ಮಾನ್ ಭಾರತ್ ವಿಶ್ವದ ಅತಿದೊಡ್ಡ ಆರೋಗ್ಯ ವಿಮಾ ಯೋಜನೆಯಾಗಿದ್ದು, ದೇಶದ 10.74 ಕೋಟಿ ಬಡವರಿಗೆ ವೈದ್ಯಕೀಯ ಸೌಲಭ್ಯಗಳನ್ನು ಸುಲಭವಾಗಿ ಒದಗಿಸುವ ಗುರಿ ಹೊಂದಿದೆ. ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ (ಪಿಎಂ-ಜೆಎವೈ) ಅಡಿಯಲ್ಲಿ 16,085 ಆಸ್ಪತ್ರೆಗಳನ್ನು ಸೇರಿಸಲಾಗಿದ್ದು, 10 ಕೋಟಿಗೂ ಹೆಚ್ಚು ಇ-ಕಾಡರ್್ಗಳನ್ನು ನೀಡಲಾಗಿದೆ. ಈ ಯೋಜನೆಯಡಿ ದೇಶಾದ್ಯಂತ ಸುಮಾರು 17,150 ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು ಕಾಯರ್ಾಚರಿಸುತ್ತಿವೆ.