ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದ ಪುನೀತ್‌ ರಾಜ್‌ ಕುಮಾರ್

ಬೆಂಗಳೂರು,‌ ಮಾ.31, ಕೊರೋನಾ ಸೋಂಕು ತಡೆಗೆ ಹಾಗೂ ಸೋಂಕಿತರ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೆ ನೀಡಿದಂತೆ ಸ್ಯಾಂಡಲ್‌ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಡಾಲರ್ಸ್ ಕಾಲೋನಿ‌ಯ ಮುಖ್ಯಮಂತ್ರಿಗಳ ನಿವಾಸದಲ್ಲಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ಭೇಟಿ ಮಾಡಿದ ನಟ ಪುನೀತ್ ರಾಜಕುಮಾರ್, ಕೊರೋನಾ ವಿರುದ್ಧ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ  50 ಲಕ್ಷ  ಚೆಕ್  ನೀಡಿದರುಪುನೀತ್ ರಾಜಕುಮಾರ್ ಮಾತನಾಡಿ, ಕೊರೊನಾ ನಿಯಂತ್ರಿಸಲು ಸಾಮಾಜಿಕ ಅಂತರವೊಂದೇ ಮಾರ್ಗ. ಪ್ರಧಾನಿ ಮೋದಿ ಹಾಗೂ ಕರ್ನಾಟಕ ಸರ್ಕಾರ ಹೇಳುವುದನ್ನು ಎಲ್ಲರೂ ಅನುಸರಿಸಬೇಕು. ಅವರು ನೀಡುವ ಸೂಚನೆಯನ್ನು ಪಾಲಿಸಬೇಕು. ಮನೆಯಲ್ಲಿ ಇರುವುದು ಕಷ್ಟ ಆಗಬಹುದು, ಆದರೆ ಇದು ಅನಿವಾರ್ಯ.  ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಕರೆ ನೀಡಿದರು.